ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಯುವ ಕಾಂಗ್ರೆಸ್ ನಿಂದ ಹೊದಿಕೆ, ಹಣ್ಣು ,ಉಪಹಾರ ವಿತರಣೆ
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ನಗರದ ಅಶೋಕ ವೃತ್ತದಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ,ನಿರ್ಗತಿಕರಿಗೆ ಹೊದಿಕೆ, ಹಣ್ಣು, ಉಪಹಾರವನ್ನು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ನೇತೃತ್ವದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ಯುವ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಬಿ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ಈಟಿ ನಿತಿನ್, ದಕ್ಷಿಣ ಬ್ಲಾಕ್ ಎಸ್ .ಕುಮಾರೇಶ್, ಪದಾಧಿಕಾರಿಗಳಾದ ಎಂ ರಾಹುಲ್, ಕೆ.ಎಲ್ .ಪವನ್, ಎಂ ರಾಕೇಶ್ , ವೆಂಕಟೇಶ್ ಕಲ್ಲೂರ್, ನವೀನ್, ದೇವರಾಜ್ ಇತರರು ಇದ್ದರು.
previous post