ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಕೊನೆಯುಸಿರೆಳೆದರು. 104 ವರ್ಷ ವಯಸ್ಸಿನ ದೊರೆಸ್ವಾಮಿ ಅವರು ಇತ್ತೀಚೆಗಷ್ಟೆ ಕೊರೊನ ಸೋಂಕಿನಿಂದ ಗುಣಮುಖರಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಅವರಿಗೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹಿರಿಯ ಪತ್ರಕರ್ತರು, ಸಾಮಾಜಿಕ ಹೋರಾಟಗಾರರಾಗಿದ್ದ ದೊರೆಸ್ವಾಮಿ ಅವರು ಈ ನಾಡಿನ ಅನೇಕ ಹೋರಾಟಗಳಿಗೆ ಸ್ಫೂರ್ತಿಯಾಗಿದ್ದರು. ಅಪ್ಪಟ ಗಾಂಧಿವಾದಿಯಾಗಿದ್ದ ಮೃತರು ರಾಜಕಾರಣದಲ್ಲಿನ ಭ್ರಷ್ಟಾಚಾರದ ವಿರುದ್ದ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದರು. ಮಲೆನಾಡಿನ ಅನೇಕ ಹೋರಾಟಗಳಿಗೆ ಪ್ರೇರಕ ಶಕ್ತಿಯಂತೆ ಕೆಲಸ ಮಾಡಿದ್ದರು. ಪ್ರಗತಿಪರ ಸಂಘಟನೆಗಳ ಯಾವುದೇ ಹೋರಾಟಗಳ ಹಿಂದೆ ದೊರೆಸ್ವಾಮಿ ಅವರ ಬೆಂಬಲ ಇತ್ತು. ಶತಾಯುಷಿಯ ನಿಧನದಿಂದ ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶ ಒಬ್ಬ ಆದರ್ಶ ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ.
previous post