ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಘೋಷಿಸಿರುವಂತೆ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ರೂ.3ಸಾವಿರ ಪರಿಹಾರ ಧನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಶಿವಮೊಗ್ಗ,ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಪಿ.ವಿಶ್ವನಾಥ್ ತಿಳಿಸಿದ್ದಾರೆ.
ಸಹಾಯಧನವನ್ನು ಒಂದು ಬಾರಿಗೆ ಕಾರ್ಮಿಕರ ಆಧಾರ್ ಕಾರ್ಡ್ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮಾ ಮಾಡಲಾಗುವುದು. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಅರ್ಹ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಈ ಪರಿಹಾರ ದೊರೆಯಲಿದೆ. ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಪರಿಹಾರ ಹಣಕ್ಕಾಗಿ ಫಲಾನುಭವಿಗಳು ಕಛೇರಿಗೆ ಭೇಟಿ ನೀಡುವ ಅಥವಾ ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸುವ ಅಗತ್ಯವಿರುವುದಿಲ್ಲ. ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯ ನವೀಕರಣವಾಗಿರಬೇಕು ಎಂಬ ನಿಯಮವಿಲ್ಲ. ಇಲಾಖೆಯಲ್ಲಿ ಫಲಾನುಭವಿಗಳ ದಾಖಲೆಗಳು ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.