ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ.ಕೊರೊನಾ ನಿಯಂತ್ರಣ ಮತ್ತು ಅದರ ನಿರ್ವಹಣೆ ಕುರಿತು ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ.
ಜೂನ್11ರಂದು ಬೆಂಗಳೂರಿನಿಂದ ಹಾಸನಕ್ಕೆ ಬರಲಿರುವ ಸಿಎಂ ಯಡಿಯೂರಪ್ಪ ,ಅಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಧ್ಯಾಹ್ನ ಹಾಸನದ ಭುವನಹಳ್ಳಿ ಹೆಲಿಪ್ಯಾಡ್ ಮೂಲಕ, ಶಿಕಾರಿಪುರಕ್ಕೆ ಹೆಲಿಕಾಪ್ಟರ್ ಬಂದಿಳಿಯಲಿದ್ದಾರೆ. ಅಲ್ಲಿ ಸಂಜೆ 4ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.ಅಂದು ಶಿಕಾರಿಪುರದಲ್ಲಿಯೇ ವಾಸ್ತವ್ಯ ಮಾಡಲ್ಲಿದ್ದಾರೆ.
ಜೂನ್ 12 ರಂದು ಶಿಕಾರಿಪುರದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಂದು ಸಂಜೆ 4 ಗಂಟೆ ರಸ್ತೆಮಾರ್ಗವಾಗಿ ಶಿವಮೊಗ್ಗಕ್ಕೆ ಬರಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಕುರಿತಾದ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತಾಗಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ವಾಪಸ್ ಶಿಕಾರಿಪುರಕ್ಕೆ ತೆರಳಿ ವಾಸ್ತವ್ಯ ಮಾಡಲ್ಲಿದ್ದಾರೆ.
ಜೂನ್ 13ರಂದು ಬೆಳಿಗ್ಗೆ 11ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
previous post