ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಶುಕ್ರವಾರ 7 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 481ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 500 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 903ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ135ಭದ್ರಾವತಿಯಲ್ಲಿ114 ,ತೀರ್ಥಹಳ್ಳಿಯಲ್ಲಿ 46,ಶಿಕಾರಿಪುರ 49 ಸಾಗರ 31,ಹೊಸನಗರ 18 ಸೊರಬದಲ್ಲಿ79 ಹಾಗೂ ಇತರೆ ಜಿಲ್ಲೆಯ29 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ5707 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.