ಚಿಕ್ಕಮಗಳೂರು : ಅರಣ್ಯ ಕಾಯಿದೆ ಉಲ್ಲಂಘಿಸಿ ಚಾರ್ಮಾಡಿ ಘಾಟಿಯಲ್ಲಿ ವಾನರಗಳಿಗೆ ಹಣ್ಣು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅರಣ್ಯ ಕಾಯಿದೆ ಉಲ್ಲಂಘಿಸಿದ್ದಾರೆ
ಕಾಡು ಪ್ರಾಣಿಗಳಿಗೆ ಹಣ್ಣುಹಂಪಲು, ಆಹಾರ ನೀಡಬಾರದು ಎಂಬುದು ಅರಣ್ಯ ಇಲಾಖೆಯ ನಿಯಮ. ಮಂಗಗಳಿಗೆ ಆಹಾರ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅರಣ್ಯ ಇಲಾಖೆ ಎಚ್ಚರಿಸಿದರೂ ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಹಣ್ಣು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಜರಂಗದಳ ವತಿಯಿಂದ ಚಾರ್ಮಾಡಿ ಘಾಟ್ ನ ಮಂಗಗಳಿಗೆ ಹಣ್ಣು ವಿತರಣೆ ಮಾಡುತ್ತಿದ್ದಾಗ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ನಳೀನ್ ಕುಮಾರ್ ಕಟೀಲ್ ಕೂಡ ಹಣ್ಣು ನೀಡಿದ್ದರು.
ಲಾಕ್ ಡೌನ್ ನಿಂದ ವಾಹನ ಸಂಚಾರವಿಲ್ಲದೆ ಆಹಾರಕ್ಕಾಗಿ ಮಂಗಗಳು ಪರದಾಡುತ್ತಿವೆ ಎಂದು ಶನಿವಾರ 100 ಕೆಜಿಗೂ ಹೆಚ್ಚು ಬಾಳೆಹಣ್ಣನ್ನು ಬಜರಂಗದಳ ಕಾರ್ಯಕರ್ತರು ನೀಡಿದ್ದರು.