ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಬುಧವಾರ ಜಿಲ್ಲೆಯಲ್ಲಿ 130 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 918 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 927 ಕ್ಕೇರಿದೆ.
ಶಿವಮೊಗ್ಗ ತಾಲೂಕಿನಲ್ಲಿ 62 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 29, ತೀರ್ಥಹಳ್ಳಿಯಲ್ಲಿ 5,ಶಿಕಾರಿಪುರದಲ್ಲಿ 15, ಸಾಗರದಲ್ಲಿ 9,ಹೊಸನಗರ 4,ಸೊರಬದಲ್ಲಿ5 ಹಾಗೂ ಇತರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4053 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ