Malenadu Mitra
ರಾಜ್ಯ ಶಿವಮೊಗ್ಗ

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸ್ತುತ ಸಾಲಿನ ಕೃಷಿ ಪ್ರಶಸ್ತಿಗಳಿಗಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಭಾಗವಹಿಸಲಿಚ್ಛಿಸುವ ರೈತರು ಭತ್ತದ ಬೆಳೆಯಲ್ಲಿ ಎಲ್ಲಾ ಮಟ್ಟಗಳಿಗೂ ಅನ್ವಯವಾಗುವಂತೆ ಏಕ ರೂಪದ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರದ ಮುಖ್ಯಸ್ಥರಿಗೆ ಆಗಸ್ಟ್ 31ರೊಳಗೆ ನಿಗದಿತ ಶುಲ್ಕ ಪಾವತಿಸಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ರೂ. 25 ಹಾಗೂ ಸಾಮಾನ್ಯ ಅಭ್ಯರ್ಥಿಗೆ ರೂ. 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ರೈತರು ಕನಿಷ್ಟ ಒಂದು ಎಕರೆ ಭತ್ತವನ್ನು ಬೆಳೆಯುವ ರೈತನಾಗಿರಬೇಕು ಹಾಗೂ ಸ್ವಯಂ ಕ್ರಿಯಾಶೀಲ ಕೃಷಿಕನಾಗಿರಬೇಕು. ಹೆಚ್ಚಿನ ಮಾಹಿತಿ ಹಾಗೂ ವಿವರಗಳನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದಲ್ಲಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಪಡೆಯಬಹುದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.


ಬೆಳೆ ವಿಮೆ ನೋಂದಣಿಗೆ ಅಧಿಸೂಚನೆ ಜಾರಿ

ಪ್ರಸ್ತುತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಟಾನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ ಹಾಗೂ ಜೋಳ ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ, ಮುಸುಕಿನ ಜೋಳ ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಸಂಸ್ಥೆ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು.

ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಮುಸುಕಿನ ಜೋಳ (ನೀರಾವರಿ/ ಮಳೆಆಶ್ರಿತ) ಬೆಳೆಗೆ ಜುಲೈ 31 ಹಾಗೂ ಭತ್ತ (ನೀರಾವರಿ/ಮಳೆಆಶ್ರಿತ), ಜೋಳ (ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಬೆಳೆಗಳಿಗೆ ಆಗಸ್ಟ್ 16 ಅಂತಿಮ ದಿನಾಂಕಗಳಾಗಿರುತ್ತವೆ.

ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು, ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡÀಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ವೆಬ್ ಸೈಟ್‍ನಲ್ಲಿಯೂ (http://samrkshane.karnataka.gov.in) ಸಹ ಮಾಹಿತಿ ಪಡೆಯಬಹುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.

Ad Widget

Related posts

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk

ಈಡಿಗ ಸಮಾಜದ ಉಪಪಂಗಡಗಳ ಸಂಘಟನೆ

Malenadu Mirror Desk

ರೈತ ಸಂಘದಿಂದ ಎನ್.ಡಿ.ಸುಂದರೇಶ್ ಸ್ಮರಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.