ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ ಶಶಿಕುಮಾರ್ ನಾಯ್ಕ್ (32 ವ) ಶೇಖರ್ ನಾಯ್ಕ್ (36 ವ) ಮೃತ ದುರ್ದೈವಿಗಳು.
ಬಿ.ಕ್ಯಾಪ್ ಹಾರೋಗೊಪ್ಪ ಸರ್ವೆ ನಂ 52ರ ತಮ್ಮ ಜಮೀನಿನಲ್ಲಿ ಬೋರವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಆಘಾತದಿಂದ ಇಬರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಗೆ ಆಧಾರವಾಗಿದ್ದ ಮಕ್ಕಳಿಬ್ಬರನ್ನೂ ಕಳೆದುಕೊಂಡ ಕುಟುಂಬದ ದುಃಖ ಮುಗಿಲು ಮುಟ್ಟಿತ್ತು. ಈ ಸಂಬಂಧಿಸಿದ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
previous post