Malenadu Mitra
ರಾಜ್ಯ ಶಿವಮೊಗ್ಗ

ಕುವೆಂಪು ವಿವಿಯಲ್ಲಿ ಆನ್‌ಲೈನ್ ಕೋರ್ಸ್ ಪ್ರಾರಂಭಕ್ಕೆ ಯುಜಿಸಿ ಅನುಮತಿ

ಕುವೆಂಪು ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಿಂದ ಪೂರ್ವಾನುಮತಿ ಇಲ್ಲದೆಯೇ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರಕಿದ್ದು, ಇದರಿಂದ ಈ ಭಾಗದ ಉನ್ನತ ಶಿಕ್ಷಣಾರ್ಥಿಗಳಿಗೆ ಅನುಕೂಲವಾಗಿದೆ.
ದೇಶಾದ್ಯಂತ 38ವಿ.ವಿಗಳಿಗೆ ಆನ್‌ಲೈನ್ ಮಾದರಿಯಲ್ಲಿ ಕೋರ್ಸುಗಳನ್ನು ಪ್ರಾರಂಭಿಸಲು ಅವಕಾಶ ನೀಡಿದೆ. ದೇಶದ 38 ವಿಶ್ವವಿದ್ಯಾಲಯಗಳು ಇನ್ನು ಮುಂದೆ ಆನ್‌ಲೈನ್ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ಪ್ರಾರಂಭಿಸಬಹುದು. ಇದರಲ್ಲಿ ಕುವೆಂಪು ವಿ.ವಿ ಕೂಡ ಸೇರಿದ್ದು ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕದಲ್ಲಿ ಕುವೆಂಪು ವಿ.ವಿ ಜೊತೆಗೆ ಜೈನ್, ಯೆನೋಪಾಯ ಮತ್ತು ಮೈಸೂರು ವಿ.ವಿಗಳಿಗೆ ಕೂಡ ಅನುಮತಿ ಸಿಕ್ಕಿದೆ. ಮೈಸೂರು ವಿಶ್ವವಿದ್ಯಾಲಯಕ್ಕೆ ವಾಣಿಜ್ಯ ಕೋರ್ಸುಗಳನ್ನು ಮಾತ್ರ ನಡೆಸಲು ಅನುಮತಿ ದೊರಕಿದ್ದು, ಯೆನೋಪಾಯ ವಿ.ವಿ.ಯು ಬಿ.ಕಾಂ ಪದವಿ ಮಾತ್ರ ಪ್ರಾರಂಭಿಸಬಹುದು. ಆದರೆ ಕುವೆಂಪು ವಿ.ವಿ ಯು ಬಿಬಿಎಂ, ಬಿ.ಕಾಂ ಮತ್ತು ಬಿ.ಎ ಸ್ನಾತಕ ಕೋರ್ಸ್‌ಗಳ ಜೊತೆಗೆ ಎಂಬಿಎ, ಎಂಕಾಂ, ಮತ್ತು ಸಮಾಜಶಾಸ್ತ್ರ, ರಾಜಕೀಯ ಶಾಸ್ತ್ರ, ಇತಿಹಾಸ, ಅರ್ಥಶಾಸ್ತ್ರ, ಇಂಗ್ಲೀಷ್ ಮತ್ತು ಕನ್ನಡ ವಿಷಯಗಳಲ್ಲಿ ಎಂಎ ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು ಪ್ರಾರಂಭಿಸಲು ಅನುಮತಿ ಪಡೆದಿದೆ. 2020-21ನೇ ಸಾಲಿನಿಂದ ಈ ಎಲ್ಲ ಕೋರ್ಸುಗಳನ್ನು ಪ್ರಾರಂಭಿಸಲು ಪ್ರತ್ಯೇಕ ಅನುಮತಿ ಪಡೆಯಬೇಕಿಲ್ಲ ಎಂದು ಯುಜಿಸಿ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಕುವೆಂಪು ವಿ.ವಿ ನ್ಯಾಕ್ ನಿಂದ ’ಎ’ ಶ್ರೇಣಿ ಪಡೆದಿದ್ದು, ಕೇಂದ್ರ ಸರ್ಕಾರದ ಎನ್‌ಐಆರ್ ಎಫ್ ನಲ್ಲಿ73ನೇ ರ್‍ಯಾಂಕ್ ಪಡೆದಿದೆ. ಇನ್ನು ಇತ್ತೀಚಿಗೆ ತಾನೆ ಬಿಡುಗಡೆಯಾದ ಸೈಮಾಗೋ ರ್‍ಯಾಂಕಿಂಗ್‌ನಲ್ಲಿ 56ನೇ ಸ್ಥಾನ ಪಡೆದು ದೇಶದ ಮುಂಚೂಣಿಯ ಉನ್ನತ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಳ್ಳುತ್ತಲಿದೆ. ಈಗಾಗಲೇ ವಿಶ್ವವಿದ್ಯಾಲಯವು ಆನ್ ಲೈನ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ವಿಶ್ವವಿದ್ಯಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಕೋವಿಡ್-19ಮಹಾಮಾರಿ ಉನ್ನತ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವುದು ಎಷ್ಟು ನಿಜವೋ, ಹೊಸ ಸಾಧ್ಯತೆಗಳ ಕಡೆಗೆ ಚಿಂತಿಸುವಂತೆ ಮಾಡಿರುವುದು ಅಷ್ಟೇ ನಿಜ. ಒಟ್ಟಾರೆ ಶಿಕ್ಷಣ ವ್ಯವಸ್ಥೆಯೇ ಅಂತರ್ಜಾಲ ತಂತ್ರಜ್ಞಾನದ ಕಡೆಗೆ ವಾಲಿರುವುದು ಸದ್ಯದ ಮಟ್ಟಿಗೆ ಒಪ್ಪಿಕೊಳ್ಳಲೇಬೇಕು. ಈ ಹಿನ್ನೆಲೆಯಲ್ಲಿ ಮಲೆನಾಡಿನ ಶಿಕ್ಷಣಾರ್ಥಿಗಳ ಮನೆಬಾಗಿಲಿಗೆ ಉನ್ನತ ಶಿಕ್ಷಣವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ಅವಕಾಶ ದೊರಕಿರುವ ದೇಶದ ಕೆಲವೇ ವಿ.ವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಕೂಡ ಒಂದು ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ

ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಪತಿ
:

ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ದೂರಶಿಕ್ಷಣ ಕೋರ್ಸ್‌ಗಳನ್ನು ನಡೆಸಲು ಕೇವಲ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಅನುಮತಿ ನೀಡಿ ಉಳಿದ ವಿ.ವಿಗಳು ಕೋರ್ಸ್‌ಗಳನ್ನು ನಿಲ್ಲಿಸುವಂತೆ ತಿದ್ದುಪಡಿ ತಂದ ಬಳಿಕ ಹಿನ್ನಡೆ ಅನುಭವಿಸಿದ್ದ ಕುವೆಂಪು ವಿ.ವಿ, ಈಗ ಆನ್‌ಲೈನ್ ಕೋರ್ಸ್‌ಗಳನ್ನು ನಡೆಸಲು ಯುಜಿಸಿ ಅನುಮತಿ ಪಡೆದಿರುವುದು ಹರ್ಷದಾಯಕ – ಪ್ರೊ. ಎಸ್. ಎಸ್. ಪಾಟೀಲ್, ಕುಲಸಚಿವ

Ad Widget

Related posts

ವಿಧಿ ನೀನೆಷ್ಟು ಕ್ರೂರ, ಮುದ್ದು ಹುಡುಗಿಯ ಕನಸು ಕೊಂದುಬಿಟ್ಟೆ….. ಹಸೆಮಣೆಯಲ್ಲಿದ್ದಾಕೆ ಮೇಲೆ ಅದೆಂತಾ ಮೋಹವಿತ್ತು ನಿನಗೆ ?

Malenadu Mirror Desk

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.11ರಿಂದ ವಿಮಾನ ಹಾರಾಟ, ಸಚಿವ ಎಂ.ಬಿ.ಪಾಟೀಲ್ ಹೇಳಿಕೆ, ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ ಮತ್ತು ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

Malenadu Mirror Desk

ಯವಜನೋತ್ಸವದಲ್ಲಿ ಜಾನಪದ ಸುಗ್ಗಿ , ಜನಮನ ಗೆದ್ದ ಕಲಾ ತಂಡಗಳು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.