ಮಲೆನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಗಾಜನೂರು ಡ್ಯಾಂ ನಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶುಕ್ರವಾರ ಗಾಜನೂರು ಡ್ಯಾಮಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಡ್ಯಾಮಿನಿಂದ ೩೨೦೦೦ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದು ಹೆಚ್ಚಾದರ ಶಿವಮೊಗ್ಗ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿದೆ. ಸೀಗೇಹಟ್ಟಿ, ಇಮಾಮ್ ಬಾಡ ಪ್ರದೇಶಗಳಿಗೆ ನೀರು ಪ್ರತಿವರ್ಷ ನುಗ್ಗುತಿದ್ದು, ಈ ಬಾರಿ ಮುಂಜಾಗೃತಾ ಕ್ರಮಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಲಾಶಯದ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರಿನ ಮಟ್ಟ ಒಳಹರಿವು ಇತ್ಯಾದಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ತಹಸೀಲ್ದಾರ್ ನಾಗರಾಜ್, ನೀರಾವರಿ ನಿಗಮದ ಅಧಿಕಾರಿಗಳು ಹಾಜರಿದ್ದರು.
previous post
next post