Malenadu Mitra
ರಾಜ್ಯ ಶಿವಮೊಗ್ಗ

ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಈ ಆದೇಶ ಜುಲೈ 5ರ ಬೆಳಿಗ್ಗೆ 5ಗಂಟೆವರೆಗೆ ಜಾರಿಯಲ್ಲಿರಲಿದೆ. ಕಂಟೈನ್‍ಮೆಂಟ್ ವಲಯದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಹವಾನುಕೂಲಿತ ಅಂಗಡಿಗಳು, ಹವಾನುಕೂಲಿತ ಶಾಪಿಂಗ್ ಕಾಪ್ಲೆಂಕ್ಸ್‍ಗಳು, ಮಾಲ್‍ಗಳಿಗೆ ಅನುಮತಿ ನೀಡಲಾಗಿಲ್ಲ. ಎಲ್ಲಾ ವಸ್ತುಗಳ ಹೋಂ ಡೆಲಿವರಿಗೆ ಸಂಪೂರ್ಣ ಅವಕಾಶ ನೀಡಲಾಗಿದೆ. ಎಲ್ಲಾ ರೀತಿಯ ಕೈಗಾರಿಕೆಗಳಿಗೆ ಶೇ.50ರಷ್ಟು ಸಿಬ್ಬಂದಿಯನ್ನು ಬಳಸಿಕೊಂಡು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಆದರೆ ಗಾರ್ಮೆಂಟ್ ಕೈಗಾರಿಕೆ ಶೇ.30ರಷ್ಟು ಸಿಬ್ಬಂದಿಯನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ಹೊಟೇಲ್, ರೆಸ್ಟೋರೆಂಟ್, ಬಾರ್‍ಗಳು ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಶೇ. 50ರಷ್ಟು ಸಾಮಥ್ರ್ಯವನ್ನು ಬಳಸಿಕೊಂಡು ವಹಿವಾಟು ನಡೆಸಬಹುದು. ಆದರೆ ಮದ್ಯವನ್ನು ಸ್ಥಳದಲ್ಲಿಯೇ ಸೇವಿಸಲು ಅವಕಾಶವಿರುವುದಿಲ್ಲ. ಹವಾನುಕೂಲಿತ ಹೊಟೇಲ್, ರೆಸ್ಟೋರೆಂಟ್, ಬಾರ್ ಮತ್ತು ಕ್ಲಬ್‍ಗಳಿಗೆ ಅವಕಾಶವಿರುವುದಿಲ್ಲ. ಲಾಡ್ಜ್, ರೆಸಾರ್ಟ್‍ಗಳು ಸಹ ಶೇ.50ರ ಸಾಮಥ್ರ್ಯದೊಂದಿಗೆ ಕಾರ್ಯನಿರ್ವಹಿಸಬಹುದು. ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಪಾರ್ಕ್‍ಗಳಲ್ಲಿ ಬೆಳಿಗ್ಗೆ 5ರಿಂದ ಸಂಜೆ 6ರವರೆಗೆ ವಾಕಿಂಗ್ ಮತ್ತು ಜಾಗಿಂಗ್‍ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹವಾನುಕೂಲಿತವಲ್ಲದ ಜಿಮ್‍ಗಳು ಶೇ.50ರ ಸಾಮಥ್ರ್ಯದೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ. ಎಲ್ಲಾ ಹೊರಾಂಗಣ ಕ್ರೀಡೆಗಳಿಗೆ ಅನುಮತಿಸಲಾಗಿದ್ದು, ಪ್ರೇಕ್ಷಕರು ಸೇರುವಂತಿಲ್ಲ.

ಪ್ರತಿ ದಿನ ರಾತ್ರಿ 7ರಿಂದ ಮರುದಿನ ಬೆಳಿಗ್ಗೆ 5ರವರೆಗೆ ರಾತ್ರಿ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಅವಶ್ಯಕ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ವೈದ್ಯಕೀಯ, ಸರಕು ಸಾಗಾಣಿಕೆ ವಾಹನಗಳ ಸಂಚಾರ, ಬಸ್, ರೈಲು ಸಂಚಾರ, ಹೋಂ ಡೆಲಿವರಿ ಇತ್ಯಾದಿ ಅವಶ್ಯಕ ಚಟುವಟಿಕೆಗಳಿಗೆ ಅವಕಾಶವಿರುವುದು. ಇದೇ ರೀತಿ ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ಸಂಜೆ 7ರಿಮದ ಸೋಮವಾರ ಬೆಳಿಗ್ಗೆ 5ರವರೆಗೆ ಕಫ್ರ್ಯೂ ಜಾರಿಯಲ್ಲಿರುವುದು.

ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿದ್ದರೂ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡುವುದು ಕಡ್ಡಾಯವಾಗಿದ್ದು, ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸುವಂತೆ ಅವರು ತಿಳಿಸಿದ್ದಾರೆ.

Ad Widget

Related posts

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Malenadu Mirror Desk

ಸಿಹಿಮೊಗೆಯ ತುಂಗಾಪಾನ ಯಾರಿಗೆ ?, ಕಾಂಗ್ರೆಸ್,ಬಿಜೆಪಿಗೆ ಹಿತಶತ್ರುಗಳ ಕಾಟ, ಅಸದೃಶ ಮತ ನಂಬಿಕೊಂಡ ಆಯನೂರು ಮಂಜುನಾಥ್‌

Malenadu Mirror Desk

ಸಿಗಂದೂರಲ್ಲಿ ಸಂಭ್ರಮದ ನವರಾತ್ರಿ ಉತ್ಸವ ಆರಂಭ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.