Malenadu Mitra
ರಾಜ್ಯ ಶಿವಮೊಗ್ಗ

ಕೋವಿಡ್ ಸಂಕಷ್ಟದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಆಹಾರ ಕಿಟ್ ವಿತರಣೆಗೆ ಸಚಿವ ಕೆ.ಎಸ್.ಈಶ್ವರಪ್ಪಚಾಲನೆ

ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಬುಧವಾರ ಮಹಾನಗರ ಪಾಲಿಕೆ ವತಿಯಿಂದ ಕೊರೊನದಿಂದ ಸಂಕಷ್ಟಕ್ಕೆ ಈಡಾದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ 2.10 ಕೋಟಿ ರೂ. ವೆಚ್ಚದಲ್ಲಿ 35 ವಾರ್ಡ್ಗಳಲ್ಲಿ ಒಟ್ಟು 46460 ಆಹಾರ ಕಿಟ್ ನೀಡುವ ಮಹತ್ತರ ಕಾರ್ಯವನ್ನು ಕೈಗೊಳ್ಳಲಾಗಿದೆ. ಪ್ರತಿ ವಾರ್ಡ್ನಲ್ಲಿ ಒಂದು ಸಾವಿರಕ್ಕೂ ಅಧಿಕ ಕಿಟ್ ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ವ್ಯಕ್ತಿಯ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡಿರುವ ಈ ಕಾರ್ಯ ಇತರ ಸ್ಥಳೀಯ ಸಂಸ್ಥೆಗಳಿಗೂ ಮಾದರಿಯಾಗಲಿ ಎಂದು ಅವರು ಹಾರೈಸಿದರು.

ಈಗಾಗಲೇ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ಲಸಿಕೆ ಹಾಕುವ ಕಾರ್ಯವನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಒಂದೇ ದಿನ ಲಕ್ಷಾಂತರ ಮಂದಿಗೆ ಲಸಿಕೆ ಹಾಕಿರುವುದು ದಾಖಲೆಯಾಗಿದೆ. ಇದೇ ರೀತಿ ನವೆಂಬರ್‌ವರೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಉಚಿತವಾಗಿ ಪಡಿತರವನ್ನು ಪೂರೈಕೆ ಮಾಡುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಸದಸ್ಯರ ವಾರೀಸುದಾರರಿಗೆ ಒಂದು ಲಕ್ಷ ರೂ. ಪರಿಹಾರ ನೀಡುತ್ತಿರುವುದು ದೇಶದಲ್ಲೇ ಪ್ರಥಮವಾಗಿದೆ ಎಂದು ಹೇಳಿದರು.

ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರದೊಂದಿಗೆ ಹಲವು ಸಂಘ ಸಂಸ್ಥೆಗಳು, ಮಠಗಳು ಮುಂದೆ ಬಂದಿದ್ದು, ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಿವೆ. ಅಂತ್ಯಸAಸ್ಕಾರವನ್ನು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಂದೆ ನಿಂತು ನೆರವೇರಿಸಿದ್ದಾರೆ. ಇದೀಗ ಮೂರನೇ ಅಲೆಯ ಬಗ್ಗೆ ಹೇಳಲಾಗುತ್ತಿದ್ದು, ಸರ್ಕಾರ ಅದನ್ನು ಎದುರಿಸಲು ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್‌ಗೆ ಯಾರೂ ಹೆದರುವ ಅಗತ್ಯವಿಲ್ಲ. ಆದರೆ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಪ್ರತಿಯೊಬ್ಬರೂ ಕಾಯ್ದುಕೊಳ್ಳುವಂತೆ ಅವರು ಮನವಿ ಮಾಡಿದರು.

ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಪ್ರಸನ್ನ ಕುಮಾರ್, ರುದ್ರೇಗೌಡ, ಮೇಯರ್ ಸುನಿತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಟಾರೆ, ಕಾರ್ಪೊರೇಟರ್‌ಗಳು ಸೇರಿದಂತೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಕೊರೊನ ನಿಯಂತ್ರಣಕ್ಕೆ ಹೋರಾಡುತ್ತಲೇ ಮಹಾಮಾರಿಗೆ ಶರಣಾದ ಶರಣ್

Malenadu Mirror Desk

ಕಾರ್‍ಯಕರ್ತರ ಶ್ರಮಕ್ಕೆ ಬೆಲೆ

Malenadu Mirror Desk

ಸಂಸದರು ಇತಿಹಾಸ ಅರಿತು ಮಾತಾಡಲಿ: ಮಧುಬಂಗಾರಪ್ಪ, ಬಗರ್‌ಹುಕುಂ ಸಾಗುವಳಿದಾರರನ್ನು ಬೀದಿಗೆ ತಳ್ಳಿದ ಬಿಜೆಪಿ ಸರಕಾರ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.