Malenadu Mitra
ರಾಜ್ಯ ಶಿವಮೊಗ್ಗ

ಆಸ್ತಿತೆರಿಗೆ ಹೆಚ್ಚಳದ ವಿರುದ್ಧ ಪತ್ರಚಳವಳಿ

ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ವಾಪಸ್ ಪಡೆಯುವಂತೆ ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಜು.9 ರಂದು ಬೆಳಗ್ಗೆ 11 ಗಂಟೆಗೆ ಗೋಪಿ ವೃತ್ತದಲ್ಲಿ ಪೆÇೀಸ್ಟ್ ಕಾರ್ಡ್ ಚಳವಳಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಾಗರೀಕರಿಗೆ ಗಾಯದ ಮೇಲೆ ಬರೆ ಎನ್ನುವಂತೆ ಆಸ್ತಿ ತೆರಿಗೆಯನ್ನು ಅವೈಜ್ಞ್ಞಾನಿಕವಾಗಿ ಏರಿಸಲಾಗಿದೆ. ಈಗಾಗಲೇ ನಮ್ಮ ಸಂಘಟನೆವತಿಯಿಂದ ಹಲವಾರು ಬಾರಿ ಪಾಲಿಕೆ ಆಯುಕ್ತರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿಲ್ಲ. ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ. ಶೇ.70ರಷ್ಟು ನಾಗರೀಕರು ನಮ್ಮ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ಜು.9 ಬೆಳಿಗ್ಗೆ 11 ಗಂಟೆಗೆ ನಗರದ ಗೋಪಿ ವೃತ್ತದಲ್ಲಿ ಅವೈಜ್ಞಾನಿಕ ಆಸ್ತಿ ತೆರಿಗೆ ವಿರೋಧಿಸಿ ಪೆÇೀಸ್ಟ್ ಕಾರ್ಡ್ ಚಳವಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳಿಗೆ ಅಂಚೆ ಪತ್ರದ ಮೂಲಕ ತೆರಿಗೆ ಹೆಚ್ಚಳ ತಗ್ಗಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಪ್ರಮುಖವಾಗಿ ಎಸ್.ಆರ್. ದರ ಆಧಾರಿತ ಆಸ್ತಿ ತೆರಿಗೆಯನ್ನು ಕೈ ಬಿಡಬೇಕು. ಸಂಕಷ್ಟದ ಈ ಸಂದರ್ಭದಲ್ಲಿ ತೆರಿಗೆ ಏರಿಕೆಯನ್ನು ಮಾಡಲೇ ಬಾರದು. ಆಸ್ತಿ ತೆರಿಗೆ ಕಾನೂನಿಗೆ ತಂದಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು. ಪ್ರಸಕ್ತ ವರ್ಷಕ್ಕೆ ಶೇ.50ರಷ್ಟು ತೆರಿಗೆ ವಿನಾಯಿತಿಯನ್ನು ಘೋಷಿಸಬೇಕು. ಕಳೆದ ಸಾಲಿನಲ್ಲಿ ಶೇ.15ರಷ್ಟು ತೆರಿಗೆಯನ್ನು ರದ್ದು ಮಾಡಬೇಕು. ಇವು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್.ಬಿ. ಅಶೋಕ್‍ಕುಮಾರ್, ಗೋಪಾಲಕೃಷ್ಣ, ಸುಬ್ರಮಣ್ಯ, ಕಮಲಾಕರ್, ದೇವೇಂದ್ರಪ್ಪ ಮತ್ತಿತರರಿದ್ದರು.

Ad Widget

Related posts

ಜವಳಿಗೆ ಶೇ. 12ರಷ್ಟು ಜಿಎಸ್‌ಟಿ : ಹೆಚ್ಚಳಕ್ಕೆ ಆಕ್ಷೇಪ ಇನ್-ಅಂಚೆ ಕಾರ್ಡು ಚಳವಳಿ

Malenadu Mirror Desk

ಶಿವಮೊಗ್ಗದಲ್ಲಿ 10 ಸಾವು, 485 ಮಂದಿಗೆ ಸೋಂಕು

Malenadu Mirror Desk

ಅತೀ ಹಿಂದುಳಿದ ವರ್ಗಕ್ಕೆ ಅಧಿಕಾರ ಸಿಗಬೇಕು: ಬಿ.ಕೆ.ಹರಿಪ್ರಸಾದ್, ಬೆಂಗಳೂರಿನಲ್ಲಿ ಸೆ.೯ ರಂದು ಸಮಾವೇಶ,ಹಕ್ಕೊತ್ತಾಯ ಮಂಡನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.