Malenadu Mitra
ರಾಜ್ಯ ಶಿವಮೊಗ್ಗ ಹೊಸನಗರ

ಅಕ್ಕ-ತಂಗಿಯನ್ನು ಬಲಿ ಪಡೆದ ಮಹಾಮಾರಿ ಒಂದೇ ಕುಟುಂಬದ 7 ಮಂದಿಗೆ ಸೋಂಕು

ಮಹಾಮಾರಿ ಕೊರೊನಕ್ಕೆ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ಕ ತಂಗಿ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ವರದಿಯಾಗಿದೆ.

ಇಲ್ಲಿನ ಕ್ರಿಶ್ಚಿಯನ್ ಕಾಲೋನಿಯಲ್ಲಿ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಅದರಲ್ಲಿ ವ್ಯಾನಿ ಗೊನ್ಸಾಲ್ವಿಸ್ (59) ಮತ್ತು ಅಪ್ಪಿ ಗೊನ್ಸಾಲ್ವಿಸ್ (52) ಗುರುವಾರ ಬೆಳಗ್ಗೆಯಿಂದ ಸಂಜೆಯ ಒಳಗೆ ನಿಧನರಾಗಿದ್ದಾರೆ. ಮೂರು ದಿನದ ಹಿಂದೆ ಕೊರೊನಾ ಟೆಸ್ಟ್‍ಗೆ ಈ ಕುಟುಂಬ ಒಳಗಾಗಿದ್ದು 7 ಜನರ ವರದಿ ಪಾಸಿಟಿವ್ ಬಂದಿತ್ತು.
ನಂತರ ಕ್ರಿಶ್ಚಿಯನ್ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಹೋದರಿಯರಿಗೆ ಸೋಂಕಿನ ತೀವ್ರತೆ ಹೆಚ್ಚಿದ ಕಾರಣ ಹೊಸನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಬ್ಬರಿಗೂ ತೀವ್ರ ಉಸಿರಾಟ ತೊಂದರೆ ಕಾಣಿಸಿಕೊಂಡು ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೆಲವೇ ಗಂಟೆಯ ಅಂತರದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

Ad Widget

Related posts

ಪದ್ಮಶ್ರೀ ಹೆಚ್.ಆರ್.ಕೇಶವಮೂರ್ತಿ ಇನ್ನಿಲ್ಲ

Malenadu Mirror Desk

ಕ್ಷಮಿಸಿ…ನನ್ನಲ್ಲಿ ಬೆಡ್‍ಗಳಿಲ್ಲ: ಮೆಗ್ಗಾನ್ ಆಸ್ಪತ್ರೆ

Malenadu Mirror Desk

ಮಾಸ ನಂಜುಂಡಸ್ವಾಮಿಗೆ ಸನ್ಮಾನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.