ರಿಪ್ಪನ್ ವರನಹೊಂಡದಲ್ಲಿ ಭೀಕರ ಅಪಘಾತ
ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪ ವರನಹೊಂಡಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗುರುವಾರ ಮಹಿಳೆಯೊಬ್ಬರು ಸಾವಿಗೀಡಾಗಿದ್ದುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ
ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿದೆ. ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಹನದಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು.

ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆ ಗೆ ಆಗಮಿಸುತ್ತಿತ್ತು.
ದೂನ ವಿಜಯೇಂದ್ರ ಭಂಡಾರಿ (60) , ನೀಲಮ್ಮ (60) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಚಾಲಕ ಕೌಶಿಕ್ ಎನ್ನಲಾಗುತ್ತಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ