ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಸೂಡೂರು ಗೇಟ್ ಬಳಿ ಭಾನುವಾರ ಖಾಸಗಿ ಬಸ್ ಹಾಗೂ ಶಿಫ್ಟ್ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ತೀವ್ರತರವಾದ ಗಾಯವಾಗಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಗರ ಮೂಲದ ಐವರು ಯುವಕರು ಬಕ್ರಿದ್ ಹಬ್ಬದ ಅಂಗವಾಗಿ ರಿಪ್ಪನ್ ಪೇಟೆಯ ಮೂಲಕ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ಕಾರಿನಲ್ಲಿದ್ದ ಐವರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕಾರು ನಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಗಳು ಆಗಿಲ್ಲ. ಗಜಾನನ ಬಸ್ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
previous post