Malenadu Mitra
ರಾಜ್ಯ ಶಿವಮೊಗ್ಗ

ಬ್ಯೂಟಿಪಾರ್ಲರ್ ಮತ್ತು ಟೈಲರಿಂಗ್ ತರಬೇತಿ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಮಣಿಪಾಲ ಇವರ ವತಿಯಿಚಿದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ಆಗಸ್ಟ್ 2 ರಿಂದ 30 ದಿನಗಳ “ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್” ಮತ್ತು ಆಗಸ್ಟ್ 5 ರಿಂದ 30 ದಿನಗಳ “ಮಹಿಳೆಯರ ಟೈಲರಿಂಗ್” ಕುರಿತಾದ ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ಪ್ರಾಯೋಗಿಕವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್‍ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ಜುಲೈ 30 ರೊಳಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ – 576104 ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬೇಕು.
ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಆಸಕ್ತ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸಬೇಕಾಗಿದ್ದು, ದೂರವಾಣಿ ಮುಖಾಂತರವೂ ತರಬೇತಿಗೆ ನೋದಾಯಿಸಿಕೊಳ್ಳಬಹುದು. ಗ್ರ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2570455, 9449862665 ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Ad Widget

Related posts

ಕುವೆಂಪು ವಿವಿ ಕುಲಸಚಿವ ಪಾಟೀಲ್ ವರ್ಗಾವಣೆ, ಶ್ರೀಧರ್ ನೂತನ ಕುಲಸಚಿವ

Malenadu Mirror Desk

ಪರಿಸರ ವಿರೋಧಿ ಯೋಜನೆಗಳಿಗೆ ವಿರೋಧಿಸಲು ಹಿಂಜರಿಯಬಾರದು:ಪ್ರೊ.ಬಿ.ಎಂ.ಕುಮಾರಸ್ವಾಮಿ

Malenadu Mirror Desk

ಶರಾವತಿ ಸಂತ್ರಸ್ತರ ಪರ ಕಾಂಗ್ರೆಸ್‌ನಿಂದ ಹೋರಾಟ : ಮಧುಬಂಗಾರಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.