Malenadu Mitra
ರಾಜ್ಯ ಶಿವಮೊಗ್ಗ

ಕುವೆಂಪು ವಿವಿ: ಜುಲೈ 26ರಿಂದ ಆಫ್‍ಲೈನ್ ತರಗತಿಗಳು ಪುನರಾರಂಭ

ಶಂಕರಘಟ್ಟ, ಜು. 22: ಬರುವ ಜುಲೈ 26ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‍ಲೈನ್ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಕರ್ನಾಟಕ ಸರ್ಕಾರದ ನಿರ್ದೇಶನದ ಮೇರೆಗೆ ಜುಲೈ 26ರ ಸೋಮವಾರದಿಂದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಭೌತಿಕ ತರಗತಿಗಳು ಪುನರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದ್ದಾರೆ.

ಸುಮಾರು ಮೂರು ತಿಂಗಳ ನಂತರ ಮುಚ್ಚಿದ್ದ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಕುವೆಂಪು ವಿವಿ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಬಿಸಲಿದೆ. ರಾಜ್ಯಸರ್ಕಾರದ ಮಾರ್ಗಸೂಚಿಗಳ ಅನ್ವಯ ತರಗತಿ ಕೊಠಡಿಗಳು, ಹಾಸ್ಟೆಲ್ ಕೊಠಡಿಗಳು, ಪ್ರಯೋಗಾಲಯಗಳು, ಕಛೇರಿ ಸೇರಿದಂತೆ ವಿವಿಯ ಕ್ಯಾಂಪಸ್ ಅನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿರುವ ಕುವೆಂಪು ವಿಶ್ವವಿದ್ಯಾಲಯ, ತರಗತಿಗೆ ಹಾಜರಾಗುವಾಗ ಕನಿಷ್ಠ ಪ್ರಥಮ ಡೋಸ್ ಲಸಿಕೆ ಪಡೆಯುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಭೌತಿಕ ಅಂತರವನ್ನು ಕಾಯ್ದುಕೊಳ್ಳುವುದು, ಮತ್ತು ಸಾನಿಟೈಸರ್ ಬಳಸುವ ಮೂಲಕ ಶುಚಿತ್ವ ಕಾಪಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಯುಜಿಸಿ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ವಿವಿ ತರಗತಿಗಳನ್ನು ಪ್ರಾರಂಭಿಸಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ಯಾಂಪಸ್ ಅನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳು ನಿರ್ಭೀತರಾಗಿ ಹಾಗೂ ಜಾಗೃತರಾಗಿ ತರಗತಿಗಳಿಗೆ ಹಾಜರಾಗಬಹುದು ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಪತಿ, ಕುವೆಂಪು ವಿ ವಿ

Ad Widget

Related posts

ಈಡಿಗ ಸಮುದಾಯದ ಹಕ್ಕೊತ್ತಾಯ ಸಮಾವೇಶ
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಈಡಿಗರ ಶಕ್ತಿಪ್ರದರ್ಶನ

Malenadu Mirror Desk

ಜನರ ನಿರೀಕ್ಷೆ ಹುಸಿ ಮಾಡದೆ ಕೆಲಸ, ಸಚಿವ ಮಧುಬಂಗಾರಪ್ಪ ಅಭಯ , ನೂತನ ಸಚಿವರಿಗೆ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ

Malenadu Mirror Desk

ಕರೂರು ಹೋಬಳಿ ನೆಟ್ವರ್ಕ್ ಸಮಸ್ಯೆ ಇತ್ಯರ್ಥಕ್ಕೆ30 ಲಕ್ಷ ಅನುದಾನ, ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲಸ: ಶಾಸಕ ಹಾಲಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.