Malenadu Mitra
ರಾಜ್ಯ ಶಿವಮೊಗ್ಗ

ಅಪಾಯದ ಮಟ್ಟದಲಿ ತುಂಗಾ, ಪ್ರವಾಹದ ಭೀತಿ ಜೋಗದಲ್ಲಿ ರುದ್ರ ರಮಣೀಯ ದೃಶ್ಯ

ಮಲೆನಾಡಿನಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದ್ದು, ಬಹುತೇಕ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಾ ನದಿಗೆ ಜಲಾಶಯದಿಂದ 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಶಿವಮೊಗ್ಗ ನಗರದ ಕುಂಬಾರಗುಂಡಿ, ಸೀಗೆಹಟ್ಟಿ ಹಾಗೂ ರಾಜೀವ್‍ಗಾಂಧಿ ಬಡಾವಣೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಇಮಾಮ್ ಬಾಡದ ಬಳಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಕಾರಣ ಜಿಲ್ಲಾಡಳಿತ ಸ್ಥಳೀಯರಿಗೆ ಎಚ್ಚರಿಕೆ ನೀಡಿದೆ.
ಶರಾವತಿ ಕಣಿವೆಯಲ್ಲಿ ವ್ಯಾಪಕ ಮಳೆಯಾಗಿದ್ದು, ಲಿಂಗನಮಕ್ಕಿ ಜಲಾಶಯಕ್ಕೆ 2.42 ಲಕ್ಷ ಕ್ಯೂಸೆಕ್ ಒಳಹರಿವಿದೆ. ಜೋಗ ಜಲಪಾತ ಅಬ್ಬರಿಸುತ್ತಿದ್ದು, ರುದ್ರರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಭದ್ರಾ ಜಲಾಶಯಕ್ಕೆ ಒಂದೇ ದಿನ ನಾಲ್ಕು ಅಡಿಗಳಷ್ಟು ನೀರು ಬಂದಿದೆ.

Ad Widget

Related posts

ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಅಲ್ಲಮಪ್ರಭು ನಾಮಕರಣ, ಸಂಪುಟ ನಿರ್ಣಯ, ಸಿಎಂ ಡಿಸಿಎಂ ಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ

Malenadu Mirror Desk

ಬಜೆಟ್‌ನಲ್ಲಿ ನೀರಾವರಿಗೆ ಆದ್ಯತೆ

Malenadu Mirror Desk

ಶಿಶುಪಾಲನಾ ಕೇಂದ್ರ ರದ್ದು, ಕಾರ್ಮಿಕರ ಮಕ್ಕಳಿಗೆ ಸರಕಾರದಿಂದ ಅನ್ಯಾಯ: ಶಾಸಕ ಚೆನ್ನಬಸಪ್ಪ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.