ಶಿವಮೊಗ್ಗ ಶಾಸಕ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ,ಹಿರಿಯ ಶಾಸಕ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಬಸವರಾಜ್ ಬೊಮ್ಮಾಯಿ ಅವರ ಸಂಪುಟ ಸೇರುವುದು ಖಚಿತವಾಗಿದೆ.
ಇಬ್ಬರಿಗೂ ಈಗಾಗಲೇ ಪ್ರಮಾಣವಚನ ಸ್ವೀಕರಿಸಲು ಬರುವಂತೆ ಆಹ್ವಾನ ಬಂದಿದೆ. ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮತ್ತೆ ಯಾವ ಶಾಸಕರಿಗೂ ಆಹ್ವಾನ ಬಂದ ಮಾಹಿತಿ ಇಲ್ಲ.. ಶಿವಮೊಗ್ಗ ಜಿಲ್ಲೆಯ ಪ್ರಮುಖ ಜನಾಂಗವಾದ ಈಡಿಗ ಸಮುದಾಯಕ್ಕೆ ಪ್ರಾತಿನಿಧ್ಯ ಸಿಗುವ ಸಾಧ್ಯತೆಗಳು ಇಲ್ಲ ಎನ್ನಲಾಗಿದೆ.
ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ಸಿಗಲಾರದು. ಹಿರಿಯರನ್ನು ಸಂಪುಟದಿಂದ ಹೊರಗಿಡುವರೆಂಬ ಗಾಳಿ ಸುದ್ದಿಗೆ ತೆರೆ ಬಿದ್ದಿದ್ದು ಪರಿವಾರದ ಬಲ ಈಶ್ವರಪ್ಪರನ್ನು ಮತ್ತೆ ಸಂಪುಟ ಸೇರಲು ಕಾರಣವಾಗಿದೆ.