ಮಕ್ಕಳ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಇಲ್ಲಿನ ಮುರುಘಾ ಮಠ ಹಾಗೂ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.
ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಭಾನುವಾರ ಹಮ್ಮಿಕೊಂಡ 181ನೇ ಮಾಸಿಕ ಹುಣ್ಣಿಮೆ ಶಿವಾನುಭವ ಮತ್ತು ರಕ್ಷಾಬಂಧನ ಹಾಗೂ ಅತಿಹೆಚ್ಚು ಅಂಕಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ನಾಡಿನಲ್ಲಿ ಮಠಗಳು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿವೆ. ನಮ್ಮ ಮಠವೂ ಆ ನಿಟ್ಟಿನಲ್ಲಿ ಶೈಕ್ಷಣಿಕ ಕೊಡುಗೆಯಲ್ಲಿ ಗುರುತಿಸಿಕೊಂಡಿದೆ ಎಂದರು.
ಜನಸಂಗ್ರಾಮ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಡಿ.ಎಸ್.ಶಂಕರ್ ಶೇಟ್ ಮಾತನಾಡಿ, ಪುರುಷನಿಗೆ ಸರಿಸಮಾನವಾಗಿ ಹೆಣ್ಣುಮಕ್ಕಳು ಬೆಳೆಯುತ್ತಿದ್ದು, ಉನ್ನತ ಶಿಕ್ಷಣ ಕೊಡಿಸುವಲ್ಲಿ ಪೋಷಕರು ಮುಂದಾಗಬೇಕು ಎಂದರು.
ಜಿಲ್ಲಾ ಪರಿಷತ್ತು ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳ ಜತೆಗೆ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನು ಕಲಿಯುವ ಅಗತ್ಯವಿದೆ ಎಂದರು.
ಸಿರಿಗೌರಿ, ಸಿಂಧು ವಚನ ಗಾಯನ ಹಾಡಿ, ವಿಜೇಂದ್ರಕುಮಾರ್ ವಂದಿಸಿ, ಡಿ.ಇವಯೋಗಿ ಸ್ವಾಗತಿಸಿ, ನಿರೂಪಿಸಿದರು.
ಜಿ.ಪಂ ಮಾಜಿ ಸದಸ್ಯೆ ಲೋಲಾಕ್ಷಮ್ಮ, ಕೃಷ್ಣಾನಂದ್, ರೇಣುಖಮ್ಮಗೌಳಿ, ಅಶೋಕ್ ನಾಯ್ಕ್, ಚೇತನಾ, ನಾಗರಾಜ್ ಗುತ್ತಿ, ಮೃತ್ಯುಂಜಯ ಗೌಡ ಇತರರಿದ್ದರು.
ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ ತಾಲೂಕಿಗೆ ಅತಿಹೆಚ್ಚು ಅಂಕ ಪಡೆದ ಕೆ.ನಿಧಿ, ನಿತಿನ್ ನಾಯ್ಕ್, ದೊರೆ ಪಾಟೀಲ್, ಬಿ.ಮಾನಸ, ನಿಶಾ ಎನ್.ಶ್ಯಾನಭಾಗ್ ಅವರನ್ನು ಸನ್ಮಾನಿಸಲಾಯಿತು.
previous post