ಸೊರಬ: ಪಟ್ಟಣದ ರಾಜೀವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ವಿಶೇಷವಾಗಿ ನಡೆಯಿತು.
ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಎಸ್.ಎಂ.ನೀಲೇಶ್ ಬಹುಮಾನ ವಿತರಿಸಿ ಮಾತನಾಡಿ, ಗ್ರಾಮೀಣ ಹಾಗೂ ಕೌಟುಂಬಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮುಖ್ಯವಾಗಿದ್ದು, ಮಹಿಳಾ ಸಬಲೀಕರಣ ಹಾಗೂ ರಕ್ಷಣೆಗೆ ಸರಕಾರಗಳು ಒತ್ತು ನೀಡುವ ಅಗತ್ಯವಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಅಧಿಕಾರಿ ಸುಬ್ರಾಯ್ ನಾಯ್ಕ್ ಪ್ರಾಸ್ತಾವಿಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರೇಂದ್ರ ಹೆಗಡೆ ಹಾಗೂ ಹೇಮಾವತಿ ಅಮ್ಮನವರು ಮಹಿಳಾ, ಆರ್ಥಿಕ ಸಬಲೀಕರಣ, ಶಿಕ್ಷಣ, ಆಧ್ಯಾತ್ಮಿಕತೆಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದ ಅವರು ಶ್ರೀ ಕೃಷ್ಣನ ಜಾಣ್ಮೆ ಹಾಗೂ ಧರ್ಮಪಾಲನೆ ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಂಗನಾಥ್ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕಿ ಯಶೋಧ ಮಾತಮಾಡಿದರು. ಒಕ್ಕೂಟದ ಅಧ್ಯಕ್ಷತೆ ಕಾಂಚನಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸದಸ್ಯೆ ಅಭಿಲಾಷ ಸ್ವಾಗತಿಸಿ, ಜ್ಞಾನ ವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ರೇಣುಕಾ ಕಾರ್ಯಕ್ರಮ ನಿರೂಪಿಸಿದರು.
ಅಂಗನವಾಡಿ ಶಿಕ್ಷಕಿ ರೋಹಿಣಿ, ಯೋಜನೆಯ ಮೇಲ್ವಿಚಾರಕ ಉಮೇಶ್, ಸೇವಾ ಪ್ರತಿನಿಧಿ ಜೆಸಿಂತಾ, ಶಿಲ್ಪಾ ಸೇರಿದಂತೆ ಒಕ್ಕೂಟದ ಮಹಿಳೆಯರು ಪಾಲ್ಗೊಂಡಿದ್ದರು.
ರಾಧಾಕೃಷ್ಣ ವೇಷಭೂಷಣ ಸ್ಪರ್ಧೆ ಹಮ್ಮಿಕೊಂಡು ವಿಜೇತ ಹಾಗೂ ಎಲ್ಲಾ ಮಕ್ಕಳಿಗೂ ಬಹುಮಾನ ನೀಡಲಾಯಿತು. ಜ್ಞಾನ ವಿಕಾಸ ಕೇಂದ್ರ ಒಕ್ಕೂಟದ ಎಲ್ಲಾ ಮಹಿಳೆಯರಿಗೂ ಕಣ್ಣಿಗೆ ಬಟ್ಟೆ ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
previous post