Malenadu Mitra
ರಾಜ್ಯ ಶಿವಮೊಗ್ಗ

ಸಾಮೂಹಿಕ ನಾಯಕತ್ವ: ಶಾ ಹೇಳಿಕೆಗೆ ಈಶ್ವರಪ್ಪ ತದ್ವಿರುದ್ಧ ಹೇಳಿಕೆ

ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲೇ ಒಲವಿದೆ ಎನ್ನುವ ಮೂಲಕ ಸಚವ ಕೆ ಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರ ಹೇಳಿಕೆಗೆ ತದ್ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಅವರು ದಾವಣಗೆರೆಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದರು. ಈ ಹೇಳಿಕೆ ನೀಡಿದ ಮರುದಿನವೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ಸಾಮೂಹಿಕ ನಾಯಕತ್ವದ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾವ ರೀತಿ ಹೇಳಿದ್ದಾರೊ ಗೊತ್ತಿಲ್ಲ. ಈ ಬಗ್ಗೆ ಒಟ್ಟಿಗೆ ಕೂತು ನಾವೆಲ್ಲಾ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದ ಬಗ್ಗೆ ಖಂಡಿತ ನಮ್ಮೆಲ್ಲರ ಒಲವು ಇದೆ. ಇದರಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರದ್ದು ಪಾತ್ರ ಇರುತ್ತದೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರು ಸಂಘಟನೆ ಕಟ್ಟುತ್ತಿದ್ದಾರೆ. ಏನೇ ಆದರೂ, ನಾವು ಮುಂದಿನ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ ಎಂದು ತಿಳಿಸಿದರು
ಗಣೇಶೋತ್ಸವಕ್ಕೆ ಬೆಂಬಲ:
ಪಕ್ಷದ ಜನಾಶೀರ್ವಾದ ಯಾತ್ರೆಯಲ್ಲಿ ಜನಜಂಗುಳಿ ಆಗುತ್ತಿರುವುದಕ್ಕೆ ನನ್ನ ಸಹಮತ ಇಲ್ಲ ಎಂದ ಈಶ್ವರಪ್ಪ ಅವರು, ಕೋವಿಡ್ ಕಾರಣದಿಂದ ಗಣಪತಿ ಉತ್ಸವ ಸ್ಥಗಿತವಾಗಬಾರದು. ನಿಬಂಧನೆಗೊಳಪಟ್ಟು ಹಬ್ಬ ಆಚರಣೆಗೆ ಸರಕಾರ ಬೆಂಬಲ ನೀಡಲಿದೆ. ಗಣಪತಿ ಉತ್ಸವ ಯಶಸ್ವಿಯಾಗಿ ಪೂರೈಸಬೇಕೆಂಬುದು ನಮ್ಮ ಆಶಯ. ಗಣಪತಿ ಉತ್ಸವ ನಡೆಸಿಯೇ, ನಡೆಸುತ್ತೇವೆ ಎಂದು ಈಶ್ವರಪ್ಪ ಹೇಳಿದರು.

Ad Widget

Related posts

ಶಿವಮೊಗ್ಗದ ಅಭಿವೃದ್ಧಿಗೆ ಮತ್ತಷ್ಟು ಯೋಜನೆ :ಬೇಕು

Malenadu Mirror Desk

ರಿಪ್ಪನ್ ಪೇಟೆ: ಬಂಡಿ,ಕಲಗೋಡು, ತಿಮ್ಮಪ್ಪ ಪ್ರಬಲ ಆಕಾಂಕ್ಷಿಗಳು

Malenadu Mirror Desk

ಚಂದ್ರಗುತ್ತಿ ಜಾತ್ರೆಗೆ ಸ್ಥಳೀಯರಿಗೆ ಮಾತ್ರ ಅವಕಾಶ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.