ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನ ವಿರೋಧಿ ಬಿಜೆಪಿ ಸರ್ಕಾರದ ನೀತಿಯನ್ನು ಖಂಡಿಸಿ ಮಹಾವೀರ ವೃತ್ತ ದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆಯಲ್ಲಿ ಅಡುಗೆ ಮಾಡಿ ಪ್ರತಿಭಟಿಸಲಾಯಿತು.
ದೇಶಕ್ಕೆ ಅಚ್ಚೇ ದಿನ್ ತರುತ್ತೇನೆಂದು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಡುಗೆ ಅನಿಲದ ದರವನ್ನು ದಿನನಿತ್ಯ ಏರಿಕೆ ಮಾಡುತ್ತಾ ಮತ್ತೆ ತಿಂಗಳಲ್ಲೇ ಒಂದೇ ಎರಡು ಬಾರಿ ಅಡುಗೆ ಅನಿಲದ ದರವನ್ನು ಏರಿಕೆ ಮಾಡುತ್ತಾ ಈಗಾಗಲೇ ಕೋವಿಡ್ ಸಂಕಷ್ಟದಲ್ಲಿರುವ ದೇಶದ ಶ್ರೀಸಾಮಾನ್ಯನ ಮೇಲೆ ಬರೆಯುತ್ತಿರುವುದು ತೀವ್ರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಹಲವಾರು ರೈತ-ಕಾರ್ಮಿಕ ಜನವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಲು ಹೊರಟಿರುವ ದೇಶದ ಅದು ಮೂರು ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ವಿಫಲವಾದ ಈ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಕೆ ಸಂದೇಶಗಳನ್ನು ನೀಡಿದ್ದು ಕೂಡಲೇ ರಾಷ್ಟ್ರಪತಿಗಳು ಈ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್. ಪಿ. ಗಿರೀಶ್, ಭವ್ಯ, ಎಂ. ಪ್ರವೀಣ್ ಕುಮಾರ್, ಪ್ರದೀಪ್, ಮಹಮ್ಮದ್ ರಫಿ, ಎನ್. ರಮೇಶ್, ಕೆ. ರಂಗನಾಥ್, ಚಿನ್ನಪ್ಪ, ಯಮುನಾ ರಂಗೇಗೌಡ, ಶ್ರೇಯಸ್ ಚಿಟ್ಟೆ, ಸುವರ್ಣಾ ನಾಗರಾಜ್, ಗೀತಾ, ಬಿ. ಲೋಕೇಶ್, ಈ.ಟಿ. ನಿತಿನ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ಅರುಣ್ ನವಲೆ, ಸಂದೀಪ್ ಗೋಣಿ, ಸಚಿನ್ ಶಿಂದೆ, ವೆಂಕಟೇಶ್ ಕಲ್ಲೂರ್, ಪವನ್, ರಾಹುಲ್, ಸಚಿನ್, ಚಿನ್ಮಯ್ ಮಸ್ತಾನ್, ತಬ್ರೆಜ್ ಇದ್ದರು.