Malenadu Mitra
ರಾಜ್ಯ ಸಾಗರ

ಸಾಗರದ ಅಳಿಯಂದಿರಾದ ಸಚಿವದ್ವಯರಿಗೆ ಸನ್ಮಾನ

ಸಾಗರ ತಾಲೂಕಿನ ಅಳಿಯಂದಿರಾದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂಧನ ಸಚಿವ ಸುನೀಲ್‌ಕುಮಾರ್ ಅವರನ್ನು ಸೆ. 11ರಂದು ಬೆಳಿಗ್ಗೆ 11ಕ್ಕೆ ಗಾಂಧಿಮೈದಾನದ ನಗರಸಭೆ ರಂಗಮಂದಿರದಲ್ಲಿ ಸನ್ಮಾನಿಸಲಾಗುವುದು ಎಂದು ಶಾಸಕ ಹಾಗೂ ಎಂ.ಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಅಳಿಯಂದಿರಾದರವರು ಈಗ ಸರಕಾರದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಅವರನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಿದೆ. ಕೋವಿಡ್ ನಿಯಮಗಳನುಸಾರ ಸರಳ ಸಮಾರಂಭದಲ್ಲಿ ಅವರನ್ನು ಗೌರವಿಸಲಾಗುವುದು. ಜತೆಗೆ ನಮ್ಮ ಜಿಲ್ಲೆಯವರೇ ಆದ ಗೃಹಸಚಿವ ಆರಗ ಜ್ಞಾನೇಂದ್ರ, ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಗೌರವಿಸಲಾಗುವುದು ಎಂದು ಹಾಲಪ್ಪ ಹೇಳಿದರು.

ರಾಷ್ಟ್ರೀಯ ಹೆದ್ದಾರಿ 206ಬಿ.ಎಚ್.ರಸ್ತೆ ಅಗಲೀಕರಣ ಸಂದರ್ಭದಲ್ಲಿ ಹೆಚ್ಚು ಮರ ಕಡಿತಲೆ ಆಗದಂತೆ ಗಮನ ಹರಿಸಲಾಗುತ್ತದೆ. ಕೆಲವು ಅಭಿವೃದ್ದಿ ಕೆಲಸ ಕೈಗೊಳ್ಳುವಾಗ ಶೇ.10ರಷ್ಟು ಕಳೆದುಕೊಳ್ಳಬೇಕಾಗುತ್ತದೆ. ಅದು ಅನಿವಾರ್ಯ ಸಹ ಆಗಿರುತ್ತದೆ. ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮರಗಳನ್ನು ಉಳಿಸಿಕೊಳ್ಳುವ ಜೊತೆಗೆ ಹೆಚ್ಚು ಸರ್ಕಾರಿ ಜಾಗವನ್ನು ಬಳಸಿಕೊಳ್ಳುವತ್ತ ಗಮನ ಹರಿಸಲಾಗಿದೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ತಾಲ್ಲೂಕು ಅಧ್ಯಕ್ಷ ಲೋಕನಾಥ್ ಬಿಳಿಸಿರಿ, ನಗರ ಅಧ್ಯಕ್ಷ ಗಣೇಶಪ್ರಸಾದ್, ಪ್ರಧಾನ ಕಾರ್ಯದರ್ಶಿಗಳಾದ ದೇವೇಂದ್ರಪ್ಪ, ಸಂತೋಷ್ ಶೇಟ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಮಾಧ್ಯಮ ಪ್ರಮುಖ್ ಸಂತೋಷ್ ಕೆ.ಜಿ. ಉಪಸ್ಥಿತರಿದ್ದರು.

Ad Widget

Related posts

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಡಾ|| ಆರ್.ಸೆಲ್ವಮಣಿ

Malenadu Mirror Desk

ಹದಿನೈದು ದಿನಗಳ ಕಾಲ ಇ-ತ್ಯಾಜ್ಯ ವಿಲೇವಾರಿ ಅಭಿಯಾನ

Malenadu Mirror Desk

ವಾಣಿ ವಿಲಾಸ ಸಾಗರಕ್ಕೆ ಭದ್ರಾ ನೀರನ್ನು ತಕ್ಷಣವೇ ನಿಲ್ಲಿಸಬೇಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.