Malenadu Mitra
ರಾಜ್ಯ ಶಿವಮೊಗ್ಗ

ಪ್ರಾಥಮಿಕ ಶಾಲೆ ಆರಂಭ: ಶೀಘ್ರ ತೀರ್ಮಾನ

ಪ್ರಾಥಮಿಕ ಶಾಲೆಯ ೧ರಿಂದ ೫ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತರಗತಿಗಳು ಪುನರಾರಂಭ ಮಾಡುವ ಬಗ್ಗೆ ಸಮಿತಿಯ ಮುಂದೆ ಈ ಬಗ್ಗೆ ವಿಷಯ ಮಂಡಿಸಲಾಗುತ್ತದೆ. ಈಗಾಗಲೇ ೬ ರಿಂದ ೯ನೇ ತರಗತಿಗಳನ್ನು ನಮ್ಮ ಶಿಕ್ಷಕರ ನಡೆಸುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಅವಶ್ಯಕತೆ ಬಿದ್ದರೆ ಪಠ್ಯ ಕಡಿತ

ಈಗಾಗಲೇ ತರಗತಿಗಳಲ್ಲಿ ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಮಾಡಲಾಗುತ್ತಿದೆ. ಪಠ್ಯಕ್ರಮ ಪೂರ್ಣ ಮಾಡುವುದರಿಂದ ಮಕ್ಕಳಿಗೆ ಲಾಭವಾಗುತ್ತದೆ. ಈಗಾಗಲೇ ಮಕ್ಕಳು ಸಾಕಷ್ಟು ತರಗತಿಗಳನ್ನು ಕಳೆದುಕೊಂಡಿದ್ದಾರೆ. ಬ್ರಿಡ್ಜ್ ಕೋರ್ಸ್ ಹಾಗೂ ಮತ್ತೆ ಪಾಠ ಮಾಡಿದ್ದರೆ ಮುಂದೆ ಸಮಸ್ಯೆ ಆಗುತ್ತದೆ. ಪಠ್ಯಕ್ರಮ ಕಡಿಮೆ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ರಜೆ ಕಡಿಮೆ ಮಾಡಿ ಇನ್ನಷ್ಟು ತರಗತಿ ನಡೆಸಬಹುದಾ ಎಂಬ ಯೋಚನೆ ನಡೆಯುತ್ತಿದೆ. ಇದು ಯೋಚನೆ ಅಷ್ಟೇ, ಯಾವುದೇ ತೀರ್ಮಾನ, ಚರ್ಚೆ ನಡೆದಿಲ್ಲ. ಶಿಕ್ಷಕರ ಸಹಕಾರ ತೆಗೆದುಕೊಂಡು ಮಾಡುವ ಯೋಚನೆ ಇದೆ. ಅವಶ್ಯಕತೆ ಬಿದ್ದರೆ ಪಠ್ಯಕ್ರಮ ಕಡಿಮೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ತಡೆಯಾಜ್ಞೆ ತೆರವಿಗೆ ಚಿಂತನೆ:
ಶಿಕ್ಷಕರ ವರ್ಗಾವಣೆಗೆ ಕೋರ್ಟ್‌ನಿಂದ ತಡೆಯಾಜ್ಞೆ ಇದೆ. ಇದನ್ನು ಶಿಕ್ಷಕರು ಯಾಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ, ಅನೇಕರಿಗೆ ಸಮಸ್ಯೆಯಾಗಿದೆ. ಅವಶ್ಯವಿದ್ದರೆ ಕೋರ್ಟ್ ಮೂಲಕವೇ ತಡೆಯಾಜ್ಞೆ ತೆರವು ಮಾಡಲಾಗುವುದು ಎಂದರು.
ನೆರೆಯ ರಾಜ್ಯವಾದ  ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ. ಆದರೆ, ನಮ್ಮ ದಕ್ಷಿಣ ಕನ್ನಡ, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಕೊರೊನಾ ಹೆಚ್ಚಾದರೆ, ಶಾಲೆ ಬಂದ್ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

Ad Widget

Related posts

ತಾಯಿನೆಲದ ಋಣ ತೀರಿಸುವ ಕಾಯಕ, 5 ಕೋಟಿ ರೂ.ಮೊತ್ತದ ವೈದ್ಯಕೀಯ ಉಪಕರಣ ಕೊಟ್ಟ ಭೂಪಾಳಂ ಕುಟುಂಬ

Malenadu Mirror Desk

ಶಿವಮೊಗ್ಗದಲ್ಲಿ ಮುಂದುವರಿದ ಕೊರೊನಾಘಾತ: 14 ಸಾವು

Malenadu Mirror Desk

ರಕ್ತದಲ್ಲಿ ಬರೆದುಕೊಡುವೆ, ಬಿಜೆಪಿ ಆಪರೇಷನ್ ಕಮಲ ಯಶ ಕಾಣುವುದಿಲ್ಲ: ಬೇಳೂರು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.