ಬೆಂಗಳೂರಿನಲ್ಲಿ ಮಂಗಳವಾರ ಶಾಸಕ ಹರತಾಳು ಹಾಲಪ್ಪ ಅವರು, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಚರ್ಚೆ ಮಾಡಿದರು.
ಹಿಂದಿನ ಸರಕಾರ ಸಂತ್ರಸ್ತರ ಭೂಮಿಯನ್ನು ಡಿನೋಟಿಪೈ ಮಾಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಮಾಡಿದೆ. ಇದರಿಂದ ಮುಳುಗಡೆ ಸಂತ್ರಸ್ತರು ಅತಂತ್ರರಾಗಿದ್ದಾರೆ. ಹೈಕೋರ್ಟ್ ನೀಡಿರುವ ಈ ಆದೇಶಕ್ಕೆ ಮೇಲ್ಮನವಿ ಸಲ್ಲಿಸುವ ಅಥವಾ ಪರಿಹಾರಕ್ಕೆ ಇರುವ ಕಾನೂನು ಮಾರ್ಗಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ವಿಷಯಕ್ಕೆ ಸಂಬAಧಿಸಿದAತೆ ಗುರುವಾರ ಉನ್ನತ ಮಟ್ಟದ ಸಭೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ಈ ಸಂದರ್ಭ ಸರಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಕಾನೂನು ಇಲಾಖೆ ಕಾರ್ಯದರ್ಶಿಗಳು, ಹೆಚ್ಚುವರಿ ಕಾನೂನು ಕಾರ್ಯದರ್ಶಿಗಳು ಮತ್ತಿತರರ ಅಧಿಕಾರಿಗಳು ಹಾಜರಿದ್ದರು.