ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು.
ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ ಸುಮಾರು ಒಂದು ತಾಸು ರಸ್ತೆ ಜಾಮ್ ಆಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು