ಭಕ್ತರು ಹಾಗೂ ಮಠದ ನಡುವಿನ ಸಂಬಂಧ ನೀರು ಮತ್ತು ಮೀನಿನ ಸಂಬಂಧವಿದ್ದಂತೆ. ನದಿಯ ನೀರು ಸ್ವಚ್ಛಗೊಳ್ಳಬೇಕಾದರೆ ಮೀನಿನ ಪಾತ್ರ ಎಷ್ಟು ಮುಖ್ಯವೊ, ಅದೇ ರೀತಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಠ ಹಾಗೂ ಸ್ವಾಮೀಜಿಗಳ ಪಾತ್ರ ಮಹತ್ವವಾಗಿದೆ ಎಂದು ಶ್ರೀಶೈಲ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.
ಸೊರಬ ತಾಲೂಕಿನ ಬಿಳವಾಣಿ ಗ್ರಾಮದಲ್ಲಿರುವ ದಿಂಡದಹಳ್ಳಿ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಠದ ಆವರಣದಲ್ಲಿ ಗುರುವಾರ ಸಾರ್ವಜನಿಕ ಸಮುದಾಯ ಭವನ ಭೂಮಿ ಪೂಜೆ ಸಮಾರಂಭದಲ್ಲಿ ಸಾನ್ನಿದ್ಯ ವಹಿಸಿ ಅವರು ಮಾತನಾಡಿದರು.
ನಾಡಿನಲ್ಲಿ ಮಠ, ಭಕ್ತರು ಹಾಗೂ ಸ್ವಾಮೀಜಿಗಳು ತ್ರಿವೇಣಿ ಸಂಗಮದ ರೂಪದಲ್ಲಿ ಆಧ್ಯಾತ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ತೊಡಗಿಕೊಂಡಿದ್ದರಿಂದ ಸಮಾಜದಲ್ಲಿ ಮಠಗಳು ಪಾಠಶಾಲೆಯಾಗಿ ರೂಪಗೊಂಡಿವೆ. ಈ ನಿಟ್ಟಿನಲ್ಲಿ ಭಕ್ತರು ಹಾಗೂ ಸ್ವಾಮೀಜಿಗಳ ಕುರುಹುಗಳಾಗಿ ಮಠಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.
ವ್ಯಕ್ತಿ ಉತ್ತಮ ಜೀವನ ಹೊಂದಬೇಕಾದರೆ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಸರ್ಕಾರ ಹಾಗೂ ಜನಪ್ರತಿನಿಧಿಗಳ ಸಹಾಯದಿಂದ ಮಠಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತಿದೆ. ಸಮುದಾಯ ಭವನ ನಿರ್ಮಾಣಕ್ಕೆ ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡುವ ಮಠದ ಅಭಿವೃದ್ಧಿಗೆ ಸಹಕರಿಸುವಂತೆ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ವಿಮಾನ ನಿಲ್ದಾಣ, ಹೊಸ ರೈಲ್ವೆ, ಪ್ರಾಮಾಸಿ ತಾಣಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಅಭಿವೃದ್ಧಿ ಮೂಲಕ ಶಿವಮೊಗ್ಗ ಜಿಲ್ಲೆ ಪ್ರವಾಸೋದ್ಯಮದಲ್ಲಿ ಗುರುತಿಸಿಕೊಳ್ಳಲಿದೆ. ದೊಡ್ಡ ದೊಡ್ಡ ಕಂಪನಿಗಳ ಸ್ಥಾಪನೆಯಿಂದ ಯುವಕರಿಗೆ ಉದ್ಯೋಗಾವಕಾಶ ದೊರೆಯಲಿದೆ ಎಂದರು.
ದಿಂಡದಹಳ್ಳಿ, ಬಿಳವಾಣಿ ಮಠದ ಪಶುಪತಿ ಶಿವಾನಂದ ಸ್ವಾಮೀಜಿ, ತೊಗರ್ಸಿ ಹಿರೇಮಳಲಿ ಮಠದ ಮಹಾಂತದೇಶಿಕೇಂದ್ರ ಸ್ವಾಮೀಜಿ, ಅಂಬಿಕಾನಗರದ ಸ್ವಾಮೀಜಿ, ಬಿಳವಾಣಿ ಗ್ರಾ.ಪಂ ಅಧ್ಯಕ್ಷೆ ಸವಿತಾ ಗುರವಪ್ಪ, ಉಪಾಧ್ಯಕ್ಷ ಬಸವರಾಜ್, ಸದಸ್ಯರಾದ ನಂದೀಶ್, ಶೃತಿ ಜಯಕುಮಾರ್, ತಾ.ಪಂ ಮಾಜಿ ಸದಸ್ಯ ಪುಟ್ಟರಾಜಗೌಡ, ಮಲೆನಾಡು ಪ್ರದೇಶಾಭಿವೃದ್ಧಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ಅರಣ್ಯ ನಿಗಮದ ಉಪಾಧ್ಯಕ್ಷ ರೇವಣಪ್ಪ, ಗುರವಪ್ಪ, ಮಲ್ಲಿಕಾರ್ಜುನಗೌಡ, ಶಿಕ್ಷಕ ಅರುಣಕುಮಾರ್, ಷಣ್ಮುಖ ಇತರರಿದ್ದರು.
previous post