Malenadu Mitra
ರಾಜ್ಯ ಶಿವಮೊಗ್ಗ

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಹಳ್ಳಿಗಳಲ್ಲಿ ಹಲವು ಕಾರ್ಯಕ್ರಮ

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಹಲವು ಕಾರ್ಯಕ್ರಮಗಳಿಗೆ ಅಕ್ಟೋಬರ್ 2ರಂದು ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಶೀವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಬಗ್ಗೆ ಅರಿವು ಮೂಡಿಸಲು `ದೌರ್ಜನ್ಯದಿಂದ ಮುಕ್ತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ರಾಜ್ಯದ ಎಲ್ಲಾ 6ಸಾವಿರ ಗ್ರಾಮ ಪಂಚಾಯತ್‍ಗಳಲ್ಲಿ ಶ್ರಮದಾನ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಪ್ರತಿ ಮನೆ ಮನೆಗೆ ನೀರು ಪೂರೈಸುವ ಜಲಜೀವನ್ ಮಿಷನ್ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಅಕ್ಟೋ¨ರ್ 2ರಂದು ಬೆಳಿಗ್ಗೆ 9ರಿಂದ 11ರವರೆಗೆ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಸಭೆಯಲ್ಲಿ ಗ್ರಾಮದ ಕುಡಿಯುವ ನೀರು, ನೈರ್ಮಲ್ಯದ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದರು.

ಗ್ರಾಮ ಪಂಚಾಂiÀiತ್ ಮಟ್ಟದಲ್ಲಿ ಜನರೇ ಯೋಜನೆಗಳನ್ನು ರೂಪಿಸಿ ಅದನ್ನು ಅನುಷ್ಟಾನಗೊಳಿಸುವ `ಸಬ್ ಕಿ ಯೋಜನಾ ಸಬ್ ಕಾ ವಿಕಾಸ್’ ಕಾರ್ಯಕ್ರಮವನ್ನು ಮೂರು ಹಂತಗಳಲ್ಲಿ ಅನುಷ್ಟಾನಗೊಳಿಸಲಾಗುವುದು. ಇದರ ಅಡಿಯಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಇರುವ ಮೂಲಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಅಕ್ಟೋಬರ್ 2ರಿಂದ 15ರವರೆಗೆ ನಡೆಯಲಿದೆ. ಈ ಮಾಹಿತಿಂiÀiನ್ನು ಮೊಬೈಲ್ ಆ್ಯಪ್‍ನಲ್ಲಿ ದಾಖಲಿಸಲಾಗುವುದು. ಎರಡನೇ ಹಂತದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳನ್ನು ತಯಾರಿಸಲಾಗುವುದು. ಇದನ್ನು ಅಕ್ಟೋಬರ್ 15ರಿಂದ 30ರವರೆಗೆ ನಡೆಸಲಾಗುವುದು. ಮೂರನೇ ಹಂತದಲ್ಲಿ ಅನುಮೋದನೆಯಾಗುವ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಈ ಯೋಜನೆಗಳ ಉದ್ಘಾಟನಾ ಸಮಾರಂಭ ಅಕ್ಟೋಬರ್ 2ರಂದು ಬೆಳಿಗ್ಗೆ 8.30ಕ್ಕೆ ಅಬ್ಬಲಗೇರಿ ಗ್ರಾಮ ಪಂಚಾಯತ್‍ನಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ಪ್ರಮಾಣ ಪತ್ರ ವಿತರಣೆ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಉದ್ಯಮಗಳನ್ನು ಆರಂಭಿಸಲು ತರಬೇತಿ ನೀಡಲಾದ 270 ಮಹಿಳೆಯರಿಗೆ ಸಚಿವರು ಈ ಸಂದರ್ಭದಲ್ಲಿ ಪ್ರಮಾಣ ಪತ್ರವನ್ನು ಸಾಂಕೇತಿಕವಾಗಿ ವಿತರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಹೋರಾಟದ ಭೂಮಿಗೆ ಪ್ರಣವಾನಂದರ ಪಾದಯಾತ್ರೆ, ಕರಾವಳಿಗರ ಬೀಳ್ಕೊಡುಗೆ, ಮಲೆನಾಡಿಗರಿಂದ ಸ್ವಾಗತ

Malenadu Mirror Desk

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk

ಚಡ್ಡಿ ಸುಟ್ಟರೆ ಕಾಂಗ್ರೆಸ್ ನಾಶ, ಏನಿದು ಈಶ್ವರಪ್ಪರ ವರಾತ , ಹಿರಿಯ ನಾಯಕರಾಗಿ ಸಿದ್ದರಾಮಯ್ಯ ವಿರುದ್ಧ ಬಳಸಿದ ಭಾಷೆ ಸರೀನಾ……..

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.