ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.
ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು ಗುರುತಿಸಲಾಗಿದೆ.
ಮನೆಯಿಂದ ದತ್ತರಾಜಪುರ ಮಾರ್ಗದಲ್ಲಿ ಹೋಗುವಾಗ ಸೀಮೆಎಣ್ಣೆ ಕೊಂಡೊಯ್ದು ಮೈಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಆಸ್ತಿವ್ಯಾಜ್ಯದ ವೈಯಕ್ತಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತ ವ್ಯಕ್ತಿ ಪತ್ನಿ,ಎರಡು ಮಕ್ಕಳನ್ನು ಅಗಲಿದ್ದು, ಈ ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
next post