Malenadu Mitra
ರಾಜ್ಯಶಿವಮೊಗ್ಗ

ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು: ಪ್ರೊ.ಬಿ.ಪಿ.ವೀರಭದ್ರಪ್ಪ

ಕುವೆಂಪು ವಿವಿಯಲ್ಲಿ‌‌ ಕನ್ನಡ ರಾಜ್ಯೋತ್ಸವ

ಕನ್ನಡನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ‌ ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಭಾಷೆಗಳಲ್ಲಿಯೇ ಅತಿ ಹೆಚ್ಚು (08) ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಕನ್ನಡ ಭಾಷೆಯ ಮಹತ್ವವನ್ನು ಸಾರಿ ಹೇಳುತ್ತದೆ. ತನ್ನದೇ ಆದ ಸ್ವಂತ ಲಿಪಿ, ಸಂಖ್ಯೆಗಳು, ವ್ಯಾಕರಣ ಮತ್ತು ಬರೆಯುವಂತೆಯೇ ಉಚ್ಛರಿಸಲ್ಪಡುವ ಜಗತ್ತಿನ ಅತ್ಯಂತ ಪ್ರಾಚೀನ‌ ಭಾಷೆ ಕನ್ನಡ ಎಂದು ಗುಣಗಾನ ಮಾಡಿದರು.

ಕನ್ನಡ ನಾಡು ನುಡಿಗೆ ಸಾಕಷ್ಟು ಮಹಾನ್ ವ್ಯಕ್ತಿಗಳ ಕೊಡುಗೆ ಇದೆ. ಹೊಸಪೀಳಿಗೆಯ ಯುವಜನತೆ ಕೂಡ ಜಾಗತಿಕ ಮಟ್ಟದ ಆಲೋಚನೆಗಳು, ಆವಿಷ್ಕಾರಗಳು ಮತ್ತು ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಪರಿಚಯಿಸಲು ಶ್ರಮಿಸಬೇಕೆಂದರು.

ಕುಲಸಚಿವೆ ಜಿ. ಅನುರಾಧ ಮಾತನಾಡಿ, ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸುವ ಸಂದರ್ಭದಲ್ಲಿ, ಪತ್ರವ್ಯವಹಾರಗಳು, ಸುತ್ತೋಲೆಗಳು, ಅಧಿಸೂಚನೆಗಳು, ಹೀಗೆ ದೈನಂದಿನ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡತನವನ್ನು ಜೀವಂತವಾಗಿಡಲಾಗಿದೆ ಎಂದರು.

ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ.ತ್ಯಾಗರಾಜ್, ಪ್ರೊ.ಎನ್.ಡಿ.ವಿರೂಪಾಕ್ಷ, ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Related posts

ಸಕ್ರೆಬೈಲು ಬಳಿ ಹೊತ್ತಿ ಉರಿದ ಖಾಸಗಿ ಬಸ್ : ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್

Malenadu Mirror Desk

ಇಂದು ಬೊಮ್ಮಾಯಿ ಸಂಪುಟಕ್ಕೆ ರಾಜೀನಾಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಘೋಷಣೆ, 40% ಕಮೀಷನ್‌ಗೆ ಮೊದಲ ಬಲಿ

Malenadu Mirror Desk

ಭದ್ರಾವತಿ ಕಾರ್ಖಾನೆಗಳು ನಮ್ಮ ಅಸ್ಮಿತೆ
ಮುಚ್ಚದಂತೆ ಹೇಳಲು ಈಶ್ವರಪ್ಪರಿಗೆ ಧಂ ಇಲ್ಲವೆ? ಹೆಚ್.ವಿಶ್ವನಾಥ್ ಪ್ರಶ್ನೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.