Malenadu Mitra
ರಾಜ್ಯಶಿವಮೊಗ್ಗ

ಲಸಿಕೆ ಪಡೆಯಲು ಧಾವಿಸುವಂತೆ ಸಾರ್ವಜನಿಕರಿಗೆ ಮನವಿ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೆ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೆ ಪಡೆಯದಿರುವ 2 ಲಕ್ಷ ಜನ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮನವಿ ಮಾಡಿದರು.

ಅವರು ಇಂದು ಜಿಲ್ಲಾಡಳಿತವು ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಟ್ಟು 141ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು ಈವರೆಗೆ ಲಸಿಕೆಯನ್ನು ಹಾಕಿಸಿಕೊಳ್ಳದಿರುವ ಸಾರ್ವಜನಿಕರು ಲಸಿಕೆಯನ್ನು ಹಾಕಿಸಿಕೊಳ್ಳಲು ಧಾವಿಸುವಂತೆ ಸಚಿವರು ಕರೆ ನೀಡಿದ ಅವರು ಈ ಲಸಿಕಾ ಆಂದೋಲನದ ಯಶಸ್ಸಿಗಾಗಿ ಆರೋಗ್ಯ ಇಲಾಖೆಯ ತಜ್ಞವೈದ್ಯರಲ್ಲದೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಪ್ರತಿ ಬುಧವಾರದಂದು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಮೇಳವನ್ನು ಆಯೋಜಿಸಲಾಗುತ್ತಿದೆ ಎಂದರು.

ರಾಜ್ಯೋತ್ಸವದ ಈ ಶುಭ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಜಿಲ್ಲೆಯ 4ಜನರಿಗೆ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿರುವುದು ನಮ್ಮೆಲ್ಲರಿಗೆ ಸಂತಸದ ತಂದಿದೆ ಎಂದರು.

ಇತ್ತೀಚೆಗೆ ಕೇಳಿ ಬರುತ್ತಿರುವ ಬಿಟ್ ಕಾಯಿನ್ ಮತ್ತು ಡ್ರಗ್ಸ್ ಅಕ್ರಮಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಅದಕ್ಕಾಗಿ ರಾಜ್ಯ ಗೃಹ ಸಚಿವರಿಗೆ ವಿಶೇಷ ಅಧಿಕಾರ ನೀಡಿದೆ ಎಂದರು.

ಸ್ವಚ್ಚ ಭಾರತ್ ಮಿಶನ್ ಯೋಜನೆಯಡಿಯಲ್ಲಿ ಜಿಲ್ಲೆಯ 270ಗ್ರಾ.ಪಂ.ಗಳಿಗೆ ಕಸ ಸಂಗ್ರಹಕ್ಕಾಗಿ ವಾಹನಗಳನ್ನು ನೀಡಲಾಗಿದೆ. ಇವುಗಳ ವ್ಯವಸ್ಥಿತ ನಿರ್ವಹಣೆಗಾಗಿ ಈಗಾಗಲೇ 30ಗ್ರಾಮ ಪಂಚಾಯಿತಿಗಳ 30 ಮಹಿಳಾ ಸಿಬ್ಬಂಧಿಗಳಿಗೆ ಮೊದಲ ಹಂತದಲ್ಲಿ ವಾಹನ ಚಾಲನಾ ತರಬೇತಿ ನೀಡಿ ನಿರ್ವಹಣೆಯ ಹೊಣೆಗಾರಿಕೆ ನೀಡಲಾಗಿದೆ. ಹಂತಹಂತವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಮಹಿಳಾ ಸದಸ್ಯರಿಗೆ ನಿರ್ವಹಣೆಯ ಹೊಣೆ ನೀಡಲಾಗುವುದು. ಈ ಕ್ರಮ ರಾಜ್ಯದಲ್ಲಿಯೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲು ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಯೋತಿಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

Ad Widget

Related posts

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 45 ದಿನಸಿ ಕಿಟ್‌

Malenadu Mirror Desk

ಮಾ.26ಕ್ಕೆ ಕೇಂದ್ರದ ಕೃಷಿ ಕಾಯಿದೆ ಪ್ರತಿ ದಹನ

Malenadu Mirror Desk

ಟೀ ಪಾತ್ರೆ ಬಿದ್ದು ಬಾಲಕ ಸಾವು, ಪೋಷಕರ ಆಕ್ರಂದನ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.