ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾಘಟಕದಲ್ಲಿ ಭಾನುವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.
ನವಜಾತ ಶಿಶುಗಳ ವಾರ್ಡಿನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಲ್ಲಿದ್ದ ರೋಗಿಗಳು ಮತ್ತು ಅವರ ಪರಿಚಾರಕರು ಹೊರಗೆ ಮೈದಾನಕ್ಕೆ ಓಡಿಬಂದಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕದಳ ವಾಹನ ಬಂದಿದ್ದು, ಬೆಂಕಿ ನಂದಿಸುವ ಕೆಲಸಮಾಡುತ್ತಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೆಡಿಕಲ್ ಕಾಲೇಜಿನ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕಗಳು ಮೇಲಿಂದ ಮೇಲೆ ಆಗುತ್ತಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.