ಇಸ್ರೋ ಮಾಜಿ ಅಧ್ಯಕ್ಷ ಡಾ.ಕಿರಣ್ ಕುಮಾರ್ : ಸಮ್ಮೇಳನಾಧ್ಯಕ್ಷ .
ಡಿಸೆಂಬರ್ 28, 29 ರಂದು ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ ನಡೆಯಲಿದ್ದು. ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಇಸ್ರೋ ಅಧ್ಯಕ್ಷ ಡಾ.ಎ.ಎಸ್. ಕಿರಣ್ ಕುಮಾರ್ ಅವರಿಗೆ ಅಧಿಕೃತವಾಗಿ ಹುಲಿಕಲ್ ನಟರಾಜ್ ನೇತೃತ್ವದ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪದಾಧಿಕಾರಿಗಳು ಬೆಂಗಳೂರಿನಲ್ಲಿಂದು ಆಹ್ವಾನ ನೀಡಿದರು.
ಆಹ್ವಾನ ಸ್ವೀಕರಿಸಿ ಮಾತನಾಡಿದ ಪ್ರೋ ಕಿರಣ್ ಕುಮಾರ್, ವಿಜ್ಞಾನ ಗ್ರಾಮದ ಪರಿಕಲ್ಪನೆ ಮೂಲಕ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು ಅಗತ್ಯವಾಗಿದೆ. ಪ್ರತಿ ಗ್ರಾಮಗಳಲ್ಲಿ ಇಂತಹ ಕಾರ್ಯ ನಡೆಯಬೇಕಿದೆ.ಎಂದು ಹೇಳಿದರು.
ಇತೀಚಿನ ದಿನಗಳಲ್ಲಿ ಮಾಟ ಮಂತ್ರದ ನೆಪದಲ್ಲಿ ಅಮಾಯಕ ರನ್ನು ವಂಚಿಸುತ್ತಿದ್ದಾರೆ. ಇಂತಹ ಕಾರ್ಯಗಳಿಗೆ ಕಡಿವಾಣ ಬೀಳಬೇಕಾದರೆ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು ಅಗತ್ಯವಾಗಿದೆ ಎಂದರು.
ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ಪರಿಷತ್ ಮೂಲಕ ರಾಜ್ಯದ ಮೂಲೆ. ಮೂಲೆಗಳಲ್ಲಿ ಜನರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲಾಗುತ್ತದೆ. ವಿಜ್ಞಾನ ಗ್ರಾಮ ನಿರ್ಮಾಣ ಮಾಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ.
ಇದೇ 28, 29ರಂದು ಶಿವಮೊಗ್ಗದಲ್ಲಿ ನಡೆಯಲಿರುವ ವೈಜ್ಞಾನಿಕ ಸಮ್ಮೇಳನದಲ್ಲಿ ವಿಜ್ಞಾನ, ಸಾಹಿತ್ಯ, ಸಮಾಜಿಕ ಸಮಸ್ಯೆಗಳ ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರ ಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಖ್ಯಾತ ವೈದ್ಯರಾದ ಡಾ.ಅಂಜನಪ್ಪ, ನಿವೃತ್ತ ಪೋಲಿಸ್ ಅಧಿಕಾರಿ ಎಸ್.ಕೆ.ಉಮೇಶ್, ಪರಿಷತ್ ಪ್ರಧಾನ ಕಾರ್ಯದರ್ಶಿ ದಾನಿ ಬಾಬುರಾವ್ ಸೇರಿದಂತೆ ಅನೇಕರು ಹಾಜರಿದ್ದರು.