ಜೆಡಿಎಸ್ ಕಚೇರಿಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು.
ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ.
ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್ ವಹಿಸಿದ್ದರು. ಮಹೇಶ್, ಕಾಂತರಾಜ್ ಸೇರಿದಂತೆ ಹಲವು ಮುಖಂಡರು ಇದ್ದರು.