ಪ್ರಸ್ತುತ ಕರ್ನಾಟಕ ಸರ್ಕಾರದ ಕೋವಿಡ್-೧೯ ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ೬೫ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.
ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಜಿ. ಅನುರಾಧ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಆಂಜನಪ್ಪ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ರೇವಣಕರ್, ಎನ್ ಎಸ್ ಎಸ್ ಪ್ರಾದೇಶಿಕ ನಿರ್ದೇಶಕ ವೈ. ಎಂ. ಉಪ್ಪಿನ್, ರಾಜ್ಯ ಎನ್ ಎಸ್ ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಡಾ. ಪರಿಸರ ನಾಗರಾಜ್, ಡಾ.ಅಣ್ಣಯ್ಯ, ಅಧ್ಯಾಪಕ ಮತ್ತು ಅಧ್ಯಾಪಕೇತರ ನೌಕರರು ಉಪಸ್ಥಿತರಿದ್ದರು.