Malenadu Mitra
ರಾಜ್ಯ ಶಿವಮೊಗ್ಗ

ಶಿವಮೊಗ್ಗ ವೈಜ್ಞಾನಿಕ ಸಮ್ಮೇಳನಕ್ಕೆ ಇಸ್ರೊ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ.೨೯ರಂದು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ, ಹೆಚ್.ನರಸಿಂಹಯ್ಯನವರ ಜನ್ಮ ಶತಮಾನೋತ್ಸವ ಹಾಗೂ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ರಾಜ್ಯಮಟ್ಟದ ಹೆಚ್.ಎನ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ್ ಅವರು ಸುದ್ದಿಗೋಷ್ಠಿಯಲ್ಲಿ ಶನಿವಾರ ಈ ವಿಷಯ ತಿಳಿಸಿದರು. ಅಂತರಾಷ್ಟ್ರೀಯ ಖ್ಯಾತಿಯ ವಿಜ್ಞಾನಿ ಇಸ್ರೊದ ಮಾಜಿ ಅಧ್ಯಕ್ಷರಾದ ಡಾ. ಎ.ಎಸ್. ಕಿರಣ್ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದು ಸಮ್ಮೇಳನದ ಹೆಗ್ಗಳಿಕೆಯಾಗಿದೆ. ಅಂದು ಬೆಳಿಗ್ಗೆ 10ಗಂಟೆಗೆ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸುವರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಆಶಯ ನುಡಿಗಳನ್ನಾಡುವರು. ಬೆಕ್ಕಿನ ಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಜ್ಞಾನ ಸಿರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವರಾದ ಆರಗ ಜ್ಞಾನೇಂದ್ರ, ಡಾ.ಅಶ್ವತ್ ನಾರಾಯಣ್, ಬಿ.ಸಿ.ನಾಗೇಶ್, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸುವರು ಎಂದರು.
ರಾಜ್ಯಮಟ್ಟದ ವಿಚಾರ ಗೋಷ್ಠಿ
ಮಧ್ಯಾಹ್ನ 2 ಗಂಟೆಗೆ ವಿಶ್ವ ಕವಿ ಕುವೆಂಪು ಹಾಗೂ ಹೆಚ್.ನರಸಿಂಹಯ್ಯನವರ ಕುರಿತಾಗಿ ರಾಜ್ಯಮಟ್ಟದ ವಿಚಾರಗೋಷ್ಠಿಯನ್ನು ಆಯೋಜಿಸಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು ಕವಿ ಕುವೆಂಪು ಹಾಗೂ ಹೆಚ್. ಎನ್ ಕುರಿತು ಖ್ಯಾತ ಸಾಹಿತಿ ಡಾ.ಕುಂ.ವೀರಭದ್ರಪ್ಪ ಮಾತನಾಡಲಿದ್ದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ವಹಿಸುವರು. ಸಂಜೆ 4ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಎಸ್.ಕಿರಣ್ ಕುಮಾರ್ ಅವರ ಉಪಸ್ಥಿತಿಯಲ್ಲಿ ರಾಜ್ಯ ಮಟ್ಟದ ಮಹಾಧಿವೇಶನವನ್ನು ಆಯೋಜಿಸಿದ್ದು ಈ ಸಭೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಯ ಹಾಗೂ ತಾಲ್ಲೂಕು ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದರು.
ಸಮಾರೋಪ ಸಮಾರಂಭ
ಸಂಜೆ 5ಕ್ಕೆ ಸಮಾರೋಪ ಸಮಾರಂಭದಲ್ಲಿ ರಾಜ್ಯಮಟ್ಟದ ಹೆಚ್.ಎನ್.ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರ ಸಾನ್ನಿಧ್ಯದಲ್ಲಿ ನಡೆಯುವ ಸಮಾರೋಪ ಸಮಾರಂಭವನ್ನು ವಿಪಕ್ಷನಾಯಕರಾದ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಸಮ್ಮೇಳನಾಧ್ಯಕ್ಷರಾದ ಡಾ.ಎ.ಎಸ್.ಕಿರಣ್ ಕುಮಾರ್ ಉಪಸ್ಥಿತರಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡವರು. ಕುವೆಂಪು ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಪಿ.ವೀರಭದ್ರಪ್ಪ ಸಮಾರೋಪ ನುಡಿಗಳನ್ನಾಡಲಿದ್ದು, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಡಿ.ಕೆ.ರಾಮಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಷಿ, ಎಂಐಡಿಬಿ ಅಧ್ಯಕ್ಷ ಗುರುಮೂರ್ತಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮೊದಲಾದವರು ಉಪಸ್ಥಿತರಿರುವರು ಎಂದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಟಿ.ಸ್ವಾಮಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ರಾಜೇಂದ್ರ ಆವಿನಹಳ್ಳಿ, ರಾಜ್ಯಸಮಿತಿಯ ಹನುಮಂತೇಗೌಡ, ಮೋಹನ್ ಕುಮಾರ್, ಗೌರಿ ಪ್ರಸನ್ನಕುಮಾರ್, ರೇಣುಕಾ ಪ್ರಸಾದ್,ನಾಗರಾಜ್ ಸಂಗಮ್ ಮತ್ತಿತರರಿದ್ದರು.


Ad Widget

Related posts

ಕೊರೊನ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ

Malenadu Mirror Desk

ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿರಬೇಕು: ಐಎಎಸ್ ಅಧಿಕಾರಿ ತೇಜಸ್ವಿನಾಯ್ಕ್, ತರಳೀಮಠದಲ್ಲಿ ಮೌಲ್ಯಾಧರಿತ ಶಿಕ್ಷಣ ಕುರಿತ ವಿಚಾರಸಂಕಿರಣ

Malenadu Mirror Desk

ಕಟ್ಟಡ ಕಾರ್ಮಿಕರು ಸೌಲತ್ತುಗಳನ್ನು ಬಳಸಿಕೊಳ್ಳಬೇಕು

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.