Malenadu Mitra
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ಕಾಮಗಾರಿ ಲೋಪಗಳ ತನಿಖೆ: ಸಚಿವ ಸುನೀಲ್ ಕುಮಾರ್

ನಿರಂತರ ಜ್ಯೋತಿ ಕಾಮಗಾರಿಯಲ್ಲಿ ಲೋಪ ದೋಷ ಎಸಗಿರುವ ಇಬ್ಬರು ಅಧಿಕಾರಿಗಳನ್ನು 24 ಗಂಟೆ ಒಳಗೆ ಅಮಾನತು ಮಾಡಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕುರಿತು ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದರು.
ನಿರಂತರ ಜ್ಯೋತಿ ಕಾಮಗಾರಿ ಪೂರ್ಣ ಆಗುವ ಮೊದಲೇ ಪೂರ್ಣಗೊಂಡ ಬಗ್ಗೆ ಸಹಿ ಹಾಕದೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಒಬ್ಬ ಅಧಿಕಾರಿ ಗುತ್ತಿಗೆದಾರನಿಗೆ ನಿರ್ವಹಣೆ ಪುಸ್ತಕ ನೀಡಿದ್ದಾರೆ. ಇಬ್ಬರನ್ನೂ ತಕ್ಷಣ ಸಸ್ಪೆಂಡ್ ಮಾಡಬೇಕು ಎಂದು ಸೂಚಿಸಿದರು.
ಕಾಮಗಾರಿ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ. ಈ ಬಗ್ಗೆ ಇಲಾಖೆ ಅಥವಾ ಎಸಿಬಿ ತನಿಖೆ ನಡೆಸಲಾಗುತ್ತದೆ. ನಿರಂತರ ಜ್ಯೋತಿ ಕಾಮಗಾರಿಯಲ್ಲಿ ಲೋಪ ದೋಷ ಎಸಗಿರುವ ಇಬ್ಬರು ಅಧಿಕಾರಿಗಳನ್ನು 24 ಗಂಟೆ ಒಳಗೆ ಅಮಾನತು ಮಾಡಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ನಿರಂತರ ಜ್ಯೋತಿ ಕಾಮಗಾರಿ ಪೂರ್ಣ ಆಗುವ ಮೊದಲೇ ಪೂರ್ಣಗೊಂಡ ಬಗ್ಗೆ ಸಹಿ ಹಾಕದೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಒಬ್ಬ ಅಧಿಕಾರಿ ಗುತ್ತಿಗೆದಾರನಿಗೆ ನಿರ್ವಹಣೆ ಪುಸ್ತಕ ನೀಡಿದ್ದಾರೆ. ಇಬ್ಬರನ್ನೂ ತಕ್ಷಣ ಸಸ್ಪೆಂಡ್ ಮಾಡಬೇಕು ಎಂದು ಸೂಚಿಸಿದರು.
ಕಾಮಗಾರಿ ಬಗ್ಗೆ ನಮ್ಮ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ. ಈ ಬಗ್ಗೆ ಇಲಾಖೆ ಅಥವಾ ಎಸಿಬಿ ತನಿಖೆ ನಡೆಸಲಾಗುತ್ತದೆ. ಭ್ರಷ್ಟಾಚಾರ ವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಲಾಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದರು.
ಈ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಶೇ.60ರಷ್ಟು ಕೇಂದ್ರ ಹಾಗೂ ಶೇ.40ರಷ್ಟನ್ನು ಮೆಸ್ಕಾಂ ಭರಿಸುತ್ತದೆ. ಗ್ರಾಮೀಣ ಪ್ರದೇಶದ 11 ಕೆ.ವಿ. ಮಾರ್ಗಗಳಲ್ಲಿ ಕೃಷಿ ಮತ್ತು ಕೃಷಿಯೇತರ ಸ್ಥಾವರಗಳನ್ನು ಬೇರ್ಪಡಿಸುವುದು, ಗ್ರಾಮೀಣ ಮನೆಗಳ ವಿದ್ಯುದ್ದೀಕರಣ, ಮಾಪಕೀಕರಣವನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ. ಯೋಜನೆಯಡಿ ಹಾಲಿ ಇರುವ 145 ಗ್ರಾಮೀಣ ಫೀಡರ್‌ಗಳ ಕೃಷಿಯೇತರ ಹೊರೆಯನ್ನು ಪ್ರತ್ಯೇಕಿಸಲು 68 ಹೊಸ ಫೀಡರ್‌ಗಳನ್ನು ನಿರ್ಮಿಸಲಾಗಿದೆ. ಈಗಾಗಲೇ 66 ಫೀಡರ್‌ಗಳನ್ನು ಚಾಲನೆಗೊಳಿಸಲಾಗಿದ್ದು, 39ಫೀಡರ್‌ಗಳ ಕಾಮಗಾರಿ ಬಿಲ್ ಪಾವತಿ ಮಾಡಲಾಗಿದೆ. ಇನ್ನುಳಿದ ಬಿಲ್ಲುಗಳ ಪಾವತಿಯನ್ನು ತಡೆ ಹಿಡಿಯಲಾಗಿದೆ ಎಂದು ಇಲಾಖಾ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಅಶೋಕ ನಾಯ್ಕ್ , ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೆಸ್ಕಾಂ ಎಂಡಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Ad Widget

Related posts

ವಿವಿಗೆ ಶಿವಪ್ಪನಾಯಕ ಹೆಸರು,ವೀರಶೈವರ ಸಂಭ್ರಮ

Malenadu Mirror Desk

ಶಿವಮೊಗ್ಗ ಸಾಹಿತ್ಯ ಪರಿಷತ್ ಚುನಾವಣೆ: ಯಾರಿಗೆ ಎಷ್ಟು ಮತ ಗೊತ್ತಾ ?

Malenadu Mirror Desk

ಶಿಕ್ಷಕರ ಸಾಹಿತ್ಯ ಪರಿಷತ್‌ನಿಂದ ಅರ್ಥಪೂರ್ಣ ಮಹಿಳಾದಿನಾಚರಣೆ, ಸಾಧಕಿಯರಿಗೆ ಗೌರವ ಸಮರ್ಪಣೆ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.