ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್‌ನವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಮೇಯರ್ ಸುನೀತ ಅಣ್ಣಪ್ಪ ಸ್ಪಷ್ಟನೆ ನೀಡಿದ್ದಾರೆ.
ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ, ಪಾಲಿಕೆ ಸದಸ್ಯರೇ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರ ನಡೆಂiಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರವಾರ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ಆರೋಪದಲ್ಲಿ ಯಾವುದೇ ಹುರಳಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾನಗರ ಪಾಲಿಕೆ ವತಿಯಿಂದ ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ಆಗುತ್ತಿರುವ ಮನೆಗಳನ್ನು ಆಗಸ್ಟ್‌ನಲ್ಲಿ ಹಂಚಿಕೆ ಮಾಡಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಗೋವಿಂದಾಪುರದಲ್ಲಿ ೩೦೦೦ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.
೨೦೧೩ ರಲ್ಲಿ ನಿರ್ಮಾಣಗೊಳ್ಳಬೇಕಿದ್ದ ಮನೆಗಳನ್ನು ಕಾಂಗ್ರೆಸ್ ನಿರ್ಮಾಣ ಮಾಡದೇ ಸುಮ್ಮನೆ ಬಿಜೆಪಿಯವರ ಮೇಲೆ ಆರೋಪ ಮಾಡುತ್ತಿದ್ದಾರೆ. ೨೦೧೮ ರಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದ ಮೇಲೆ ಮನೆಗಳನ್ನು ನಿರ್ಮಾಣವಾಗಿದೆ. ಆಗಸ್ಟ್ ನಲ್ಲಿ ೧ ಸಾವಿರ ಮನೆ ಹಂಚಲಿದ್ದೇವೆ ಎಂದರು. ಕೆಲಸವಿಲ್ಲದೆ ಕಾಂಗ್ರೆಸ್ ಜನರಿಗೆ ತಪ್ಪು ಸಂದೇಶ ನೀಡುತ್ತಿದೆ. ೮ ತಿಂಗಳ ಲಾಕ್ ಡೌನ್ ಆಗಿದೆ. ಪಾಲಿಕೆಯ ಕೆಲಸ ಕುಂಠಿತಗೊಂಡಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಪಮೇಯರ್ ಶಂಕರ್ ಗನ್ನಿ,ಪಾಲಿಕೆ ಸದಸ್ಯರಾದ ಜ್ಣಾನೇಶ್ವರ್,ಧೀರರಾಜ್ ಹೊನ್ನವಿಲೆ ಸೇರಿದಂತೆ ಹಲವರಿದ್ದರು.
ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿಲ್ಲ. ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾದ ಸಂಗತಿ. ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗಿರುವುದು ಸತ್ಯ. ಆದರೆ ಭ್ರಷ್ಠಾಚಾರವಾಗಿದೆ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಅಷ್ಟೆ
ಎಸ್.ಎನ್. ಚನ್ನಬಸಪ್ಪ, ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕ