ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಗುರುವಾರ 319 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.
ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ 171 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 59,ತೀರ್ಥಹಳ್ಳಿ 19, ಶಿಕಾರಿಪುರ13, ಸಾಗರ37, ಹೊಸನಗರ 8, ಸೊರಬದಲ್ಲಿ 8 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 4 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ979 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.