Malenadu Mitra
ತೀರ್ಥಹಳ್ಳಿ ರಾಜ್ಯ ಶಿವಮೊಗ್ಗ

ಸಾಲದಹೊರೆಯಿಂದಾಗಿ ದಂಪತಿ ನೇಣಿಗೆ ಶರಣು

ಅಡಕೆ ಚೇಣಿ ಮಾಡಿ ಸಾಲ ಮಾಡಿದ್ದು, ಉದ್ಯಮದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.
ಮಂಜುನಾಥ್ ೪೬ ) ಉಷಾ ( ೪೩) ನೇಣಿಗೆ ಕೊರಳೊಡ್ಡಿದ ದುರ್ದೈವಿಗಳು. ಇವರಿಗೆ ೧೮ ಮತ್ತು ೧೬ ವರ್ಷದ ಎರಡು ಗಂಡು ಮಕ್ಕಳು ಇದ್ದಾರೆ. ಸುಮಾರು ೨ ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದ ಮಂಜುನಾಥ್ ದಂಪತಿ, ಕೃಷಿ ಚಟುವಟಿಕೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲ ಮಾಡಿಕೊಂಡಿದ್ದು ಕೊರೊನ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ ದಂಪತಿ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಮಾಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget

Related posts

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕರೆ ನೀಡಿದ ಶಾಮನೂರು ,ಶಿವಶಂಕರಪ್ಪಗುರುಬಸವ ಶ್ರೀ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ಸಿಗ

Malenadu Mirror Desk

ಶ್ರೀಕಾಂತ್‌ಗೆ ಅದ್ದೂರಿ ಸ್ವಾಗತ, ವಿಧ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆ, ತೆರೆದ ಕಾರಿನಲ್ಲಿ ಭವ್ಯ ಮೆರವಣಿಗೆ, ಅಭಿಮಾನಿಗಳ ಹರ್ಷೋದ್ಘಾರ

Malenadu Mirror Desk

ಅಡಕೆ ಮಾನ ಕಾಪಾಡಲು ಪಂಚ ತಜ್ಞರ ಸಮಿತಿ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.