ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಶನಿವಾರ 366 ಪ್ರಕರಣಗಳು ದಾಖಲಾಗಿವೆ.
ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ 161 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 98 ತೀರ್ಥಹಳ್ಳಿ 16, ಶಿಕಾರಿಪುರ 05,ಸಾಗರ 49 ಹೊಸನಗರ 23, ಸೊರಬದಲ್ಲಿ 8 ಪ್ರಕರಣಗಳು ದಾಖಲಾಗಿದ್ದರೆ, ಹೊರಜಿಲ್ಲೆಗಳ 06 ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 1335 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ರುದ್ರೇಗೌಡರಿಗೆ ಪಾಸಿಟಿವ್
ವಿಧಾನ ಪರಿಷತ್ ಸದಸ್ಯರೂ ಹಾಗೂ ಕೈಗಾರಿಕೋದ್ಯಮಿ ಎಸ್.ರುದ್ರೇಗೌಡರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.