ಸಾಗರ ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆರ್ಯ ಈಡೀಗ ಮಹಾ ಸಂಸ್ಥಾನದ ಶ್ರೀ ರೇಣುಕಾ ಪೀಠದ ನೂತನ ಪೀಠಾಧಿಪತಿಗಳಾದ ವಿಖ್ಯಾತಾನಂದ ಶ್ರೀಗಳು ಆಗಮಿಸಿದರು. ಈ ವೇಳೆ ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಅತ್ಮಿಯವಾಗಿ ಬರಮಾಡಿಕೊಂಡರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳು ದೇವಸ್ಥಾನದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಕೆಲ ಕಾಲ ಚರ್ಚೆ ನಡೆಸಿದರು ನೂತನ ಪೀಠಾರೋಹಣದ ನಂತರ ಮೊದಲ ಬಾರಿಗೆ ಆಗಮಿಸಿದ ಶ್ರೀ ಗಳಿಗೆ ಶ್ರೀ ಕ್ಷೇತ್ರದ ವತಿಯಿಂದ ಗೌರವ ಸಮರ್ಪಿಸಲಾಯಿತು.
ಈ ಸಂಧರ್ಭದಲ್ಲಿ ದೇವಸ್ಥಾನದ ಕಾರ್ಯದರ್ಶಿ ರವಿಕುಮಾರ್ ಹೆಚ್ ಆರ್ ಮ್ಯಾನೇಜರ್ ಪ್ರಕಾಶ್. ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಪರಿಷತ್ ಜಿಲ್ಲಾಧ್ಯಕ್ಷ ನಾಗರಾಜ್ ಕೈಸೋಡಿ ಸೇರಿದಂತೆ ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.