ಮಹಾಶಿವರಾತ್ರಿ ಪ್ರಯುಕ್ತ ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಬಣೆಯಿಂದ ನಡೆಯಲಿದೆ. ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುವ ಈ ಜಾತ್ರೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಫೆ..28 ರಂದು ರಾತ್ರಿ ಗಣಹೋಮ, ಪಂಚಕಲಶ ಪೂಜೆ ನೆರವೇರಲಿದೆ. ಮಾ.1 ರಂದು ಬೆಳಗ್ಗೆ 7 ರಿಂದ ಅಭಿಷೇಕ, ಗಂಗಾಪೂಜೆ ಹಾಗೂ ಸಂಜೆ ಶ್ರೀ ಬಸೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ರಾಜಬೀದಿ ಉತ್ಸವ ನಡೆಯಲಿದೆ. ಈ ಸಂದರ್ಭ ಗ್ರಾಮದ ಹಾಗೂ ನೆರೆಹೊರೆಯ ಗ್ರಾಮಗಳ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ.
ಅದೇ ದಿನ ರಾತ್ರಿ 9.30 ರಿಂದ ಶಿವಭಕ್ತ ವೀರಮಣಿ ಮತ್ತು ಮೀನಾಕ್ಷಿ ಕಲ್ಯಾಣ ಎಂಬ ಅಹೋರಾತ್ರಿ ಯಕ್ಷಗಾನ ಪ್ರದರ್ಶನವಿದೆ. ಶ್ರೀ ಬಸವೇಶ್ವರ ಯಕ್ಷಗಾನ ಮಂಡಳಿ ಮತ್ತು ಉತ್ತರಕನ್ನಡ ಜಿಲ್ಲೆ ಕಿಲಾರದ ಮಹಾಗಣಪತಿ ಯಕ್ಷಗಾನ ಮಂಡಳಿ ಕಲಾವಿದರು ಯಕ್ಷಗಾನದಲ್ಲಿ ಭಾಗವಹಿಸಲಿದ್ದಾರೆ.
ಮಾ. 2 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಮಂಗಳಾರತಿ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮಗಳಿವೆ ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಸ್ಥಾನ ಜೀರ್ಣೋದ್ದಾರ ಸಮಿತಿ ಕೋರಿದೆ.