ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ ಮಹಿಳಾ ದಿನಾಚರಣೆಯನ್ನು ಆರೋಗ್ಯವೇ ಭಾಗ್ಯ ಎಂಬ ಆಶಯದಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಹ್ಯಾದ್ರಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ಸಂದರ್ಭ ವೈದ್ಯವೃಂದವನ್ನು ಜೆಸಿಐ ವತಿಯಿಂದ ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರ ಸಹಕಾರದಿಂದ ಸುಮಾರು ೨೦೦ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
sಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರು ಹಾಗೂ ಕೋವಿಡ್ ಸಂದರ್ಭದಲ್ಲಿ ಅತ್ಯಂತ ಚಟುವಟಿಕೆಯಿಂದ ಕಾರ್ಯನಿರ್ವಹಿಸಿದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ನಾಗರಾಜ್, ಮುಖ್ಯ ಭಾಷಣಕಾರರಾಗಿ ಜೆಸಿ ಸುರೇಖಾ ಮುರಳಿಧರ್ ಆಗಮಮಿಸಿದ್ದರು. ಜೆಸಿ ವಲಯಾಧಿಕಾರಿಗಳಾದ ಭಾರತಿ ಎಚ್ ಡಿ, ಮೇಘ ಸುರೇಶ್, ಜೆಸಿಐ ಶಿವಮೊಗ್ಗ ವಿವೇಕ್ ಅಧ್ಯಕ್ಷೆ ವಿ ವಾಣಿ ಜಗದೀಶ್ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರದೀಪ್. ಮಾನಸ,ಕುಸುಮಾ ಪ್ರಮುಖರಾದ ಹೆಬ್ಬೂರು ನಾಗರಾಜ್ ಮತ್ತಿತರರಿದ್ದರು