ತೀರ್ಥಹಳ್ಳಿ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಳಂಕ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಪೋಸ್ಟ್ ಸಿಕ್ಕಿದೆ ಎಂದು ಖುಷಿ ಪಟ್ಟಿದ್ದೆ. ನಾನೇ ಸನ್ಮಾನ ಸಹ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೇ ಅಧಿವೇಶನ ಸಹ ನಡೆಯಲ್ಲ. ಆದರೆ, ಇಂದು ತಮ್ಮ ಅಜ್ಞಾನ ಮತ್ತು ಕೋಮುವಾದದ ಮನಸ್ಥಿತಿಯಿಂದ ಆರಗ ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಜನರು ಆರಗ ಜ್ಞಾನೇಂದ್ರ ಅವರನ್ನು ಬೈಯ್ಯುತ್ತಿದ್ದಾರೆ. ನೀವು ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಿ. ಸರ್ಕಾರದ ಭಾಗವಾಗಿರುವ ಸಚಿವರು, ಶಾಸಕರು, ಮುಖಂಡರು ಶಾಂತಿ- ಸುವ್ಯವಸ್ಥೆ ಕಾಪಾಡಬೇಕು. ಆಡಳಿತ ಪಕ್ಷದವರೇ ಕೋಮುಗಲಭೆ ಸೃಷ್ಟಿಸುತ್ತಿರುವುದು ದೇಶದ ದುರಂತ. ಒಬ್ಬ ಗೃಹ ಸಚಿವರಾಗಿ ಕೋಮು ಭಾವನೆ ಕೆರಳಿಸುವಂತೆ ಹೇಳಿಕೆ ಕೊಡ್ತಾರೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಮಿನಿಸ್ಟರ್ ಹೀಗೆ ಮಾತಾಡಿದ್ರೆ ಹೇಗೆ, ಹೋಮ್ ಮಿನಿಸ್ಟರ್ ಇರೋದು ಕೋಮು ಭಾವನೆ ಸೃಷ್ಟಿಸೋಕಾ ಅಥವಾ ಕಡಿಮೆ ಮಾಡೋಕಾ ಇವರ ವಿರುದ್ದವೇ ಕೇಸ್ ದಾಖಲಿಸಬೇಕು. ಸಿಎಂ ಇವರನ್ನು ವಜಾ ಮಾಡಬೇಕಿತ್ತು ಎಂದರು.
ಗೃಹ ಸಚಿವರಾಗಿ ಚುಚ್ಚಿ-ಚುಚ್ಚಿ ಕೊಲೆ ಮಾಡ್ತಾರೆ ಅಂತಾರೆ. ಚಂದ್ರು ಉರ್ದು ಮಾತಾಡಲಿಲ್ಲ ಎಂದು ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ಮುಗಿಬೀಳಲಿ ಎನ್ನುವ ಉದ್ದೇಶವಿದೆ. ಗೃಹಸಚಿವರ ವಿರುದ್ಧವೇ ದೇಶದ್ರೋಹದ ಕೇಸ್ ದಾಖಲಿಸಬೇಕು. ಅವರ ರಾಜೀನಾಮೆಗೆ ಒತ್ತಾಯಿಸಿ, ಏ.೦೮ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.
ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ದೂರು ಕೊಡಲು ಹೋದರೆ ಅವರಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ. ಸಚಿವರೇ ಈ ರೀತಿಯ ಅಸಂಬದ್ಧ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅವರ ಇಲಾಖೆಯ ಅಧಿಕಾರಿಗಳು ಯಾವ ರೀತಿ ಕೆಲಸ ಮಾಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ಶಿವಮೊಗ್ಗ ತಾಲೂಕು ಗಾಜನೂರಿನಲ್ಲಿ ಕಲ್ಲುಗಳನ್ನು ಬಿಜೆಪಿ ಕಾರ್ಯಕರ್ತರು ಕದ್ದು ಸಾಗಿಸುತ್ತಿದ್ದಾರೆ ದೂರು ಕೊಡಲು ಹೋದರೆ ಯಾರೂ ಕ್ಯಾರೆ ಎನ್ನುತ್ತಿಲ್ಲ ಎಂದು ಕಿಮ್ಮನೆ ಆರೋಪಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್, ಮಹಾನಗರಪಾಲಿಕೆ ಆಡಳಿತ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯೆ ರೇಖಾ ರಂಗನಾಥ್,ಕಾಂಗ್ರೆಸ್ ಮುಖಂಡರಾದ ಎಸ್‌ಪಿ ದಿನೇಶ್, ವಿಜಯ್‌ಕುಮಾರ್(ದನಿ),ರಂಗೇಗೌಡ,ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ ಇದ್ದರು.
ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ದೂರು ಕೊಡಲು ಹೋದರೆ ಅವರಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ. ಸಚಿವರೇ ಈ ರೀತಿಯ ಅಸಂಬದ್ಧ ಮತ್ತು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅವರ ಇಲಾಖೆಯ ಅಧಿಕಾರಿಗಳು ಯಾವ ರೀತಿ ಕೆಲಸ ಮಾಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.
ಕಿಮ್ಮನೆ ರತ್ನಾಕರ್