Malenadu Mitra
ರಾಜ್ಯಶಿವಮೊಗ್ಗ

ಮೇ 30ರಿಂದ ಬೆಂಗಳೂರಿನಲ್ಲಿ 3 ದಿನಗಳ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ : ಸಿ.ಎಸ್.ಷಡಾಕ್ಷರಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ30,31 ನೇ ಹಾಗೂ ಜೂನ್ 1 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ ೩೦ರಂದು ಸಂಜೆ 4.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸುತ್ತಿದ್ದು, ಸಚಿವ ಸಂಪುಟದ ಹಲವು ಸಚಿವರುಗಳು ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ವಿಶೇಷ ಎಂದು ತಿಳಿಸಿದ್ದಾರೆ.
ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ಸ್‌ಸೂಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟೋಪಹಾರವನ್ನು ಕಲ್ಪಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು. ಅಖಿಲ ಭಾರತ ನಾಗರೀಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂಸು ತಿಳಿಸಿದ್ದಾರೆ.
ಈ ಕ್ರೀಡಾಕೂಟ ನಡೆಯುವ ಆರಂಭದ ದಿನ ಮೇ30 ರಂದು ಸಂಜೆ 6 ಗಂಟೆಯಿಂದ ಖ್ಯಾತ ಗಾಯಕ ವಿಜಯ್ ಪ್ರಕಾಶ್‌ರವರಿಂದ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ 31 ರಂದು ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಾಯೋಜಿತ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದಿದ್ದಾರೆ.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸಿಗೊಳಿಸಿಕೊಡುವಂತೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮನವಿ ಮಾಡಿದ್ದಾರೆ.

Ad Widget

Related posts

ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿರುವ ಸಚಿವ ಈಶ್ವರಪ್ಪ:ಕೆಬಿಪಿ ಆರೋಪ

Malenadu Mirror Desk

ಅನುಕಂಪದ ಅಲೆಯಲ್ಲಿ ಕಿಮ್ಮನೆ, ಅಧಿಕಾರದ ಪ್ರಭಾವಳಿಯಲ್ಲಿ ಆರಗ, ಬುದ್ದಿವಂತರ ಮತಕ್ಷೇತ್ರದಲ್ಲಿ ಕುತೂಹಲ ಘಟ್ಟದಲ್ಲಿ ರಣಕಣ

Malenadu Mirror Desk

ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

Malenadu Mirror Desk

Leave a Comment

error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.