ಶಿವಮೊಗ್ಗ,ಜೂ.೨೩: ಜಿಲ್ಲಾ ಆರ್ಯಈಡಿಗ ಸಂಘದಿಂದ ಸೋಲೂರು ರೇಣುಕಾ ಪೀಠದ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರಿಗೆ ಗುರುವಂದನೆ ಹಾಗೂ ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನ ವತಿಯಿಂದ ವಿದ್ಯಾರ್ಥಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಹೇಳಿದರು.
ಗುರುವಾರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. ೨೫ ರಂದು ಬೆಳಗ್ಗೆ ೧೦.೩೦ ಕ್ಕೆ ಈಡಿಗ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈಡಿಗ ಮಹಾಸಂಸ್ಥಾನದ ರೇಣುಕಾ ಪೀಠಕ್ಕೆ ಪೀಠಾಧಿಪತಿಯಾಗಿ ಆಯ್ಕೆಯಾದ ಬಳಿಕ ಇದೆ ಮೊದಲ ಬಾರಿಗೆ ಸ್ವಾಮೀಜಿ ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಅವರಿಗೆ ಗುರುವಂದನೆ ಸಲ್ಲಿಸಲಾಗುವುದು. ಅದೇ ದಿನ ಜೆ.ಪಿ.ನಾರಾಯಣಸ್ವಾಮಿ ಪ್ರತಿಷ್ಠಾನದಿಂದ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದರು.
ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಮ ನಡೆಯಲಿದೆ. ಪ್ರತಿಷ್ಠಾನದ ಅಧ್ಯಕ್ಷ ಜೆ.ಪಿ.ಸುಧಾಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಮುಖರಾದ ಡಾ.ನರಸಿಂಹಯ್ಯ, ಪೂರ್ಣೇಶ್, ಕುಸುಮ ಅಜಯ್ ಮೊದಲಾದವರು ಆಗಮಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮಾನವಿ ಮಾಡಿದರು
ಪ್ರತಿಷ್ಠಾನದ ಜಿಲ್ಲಾ ಸಂಚಾಲಕ ತೇಕಲೆ ರಾಜಪ್ಪ ಮಾತನಾಡಿ, ಜೆಪಿ ಪ್ರತಿಷ್ಠಾನದಿಂದ ರಾಜ್ಯಾದ್ಯಂತ ಇರುವ ಸಮಾಜದ ಬಡ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಇಲ್ಲಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪದವಿ, ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಈಡಿಗ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಸಿ. ರಾಮಚಂದ್ರ, ರಾಜ್ಯ ಪ್ರತಿನಿಧಿ ಎಚ್. ರವಿ, ಪ್ರಮುಖರಾದ ಜಿ.ಡಿ.ಮಂಜುನಾಥ್, ಕಾಗೋಡು ರಾಮಪ್ಪ , ಕೃಷ್ಣಪ್ಪ, ಪ್ರೊ.ಎಚ್.ಕಲ್ಲನ ಮತ್ತಿತರರಿದ್ದರು.